More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ 227 ವಿದ್ಯಾರ್ಥಿಗಳು ಗೈರು

    ಶಿವಮೊಗ್ಗ: ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಅಡ್ಡಿ-ಆತಂಕಗಳಿಲ್ಲದೆ ಸುಗಮವಾಗಿ ನಡೆಯಿತು. 94 ಕೇಂದ್ರಗಳಲ್ಲಿ 21 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಮೊದಲ ದಿನವೇ 199 ರೆಗ್ಯುಲರ್ ಸೇರಿದಂತೆ ಒಟ್ಟಾರೆ 227 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
    ಪ್ರಥಮ ಭಾಷೆಯನ್ನು 21,643 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು 21,416 ಮಂದಿ ಹಾಜರಾಗಿದ್ದರು. 21345 ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ 21146 ಮಂದಿ ಪರೀಕ್ಷೆ ಬರೆದರೆ, 199 ಗೈರುಹಾಜರಾಗಿದ್ದರು. 298 ರಿಪೀಟರ್‌ಗಳಲ್ಲಿ 28 ಮಂದಿ ಗೈರಾಗಿದ್ದರು.
    ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲಿರಿಸಲಾಗಿತ್ತು. ಪರೀಕ್ಷೆ ನಕಲು ಮಾಡುವುದಕ್ಕೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ದೂರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಲ್ಲದೆ, ಜೆರಾಕ್ಸ್ ಸೆಂಟರ್‌ಗಳನ್ನೂ ಮುಚ್ಚಲಾಗಿತ್ತು. ಪ್ರತಿ ಸೆಂಟರ್‌ಗೂ ಪೊಲೀಸ್ ಭದ್ರತೆಯನ್ನೂ ಕಲ್ಪಿಸಲಾಗಿತ್ತು. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
    ಆತಂಕವಿಲ್ಲದೆ ಪರೀಕ್ಷೆ ಬರೆದ ಮಕ್ಕಳು: ಮೊದಲ ವಿಷಯವಾದ ಕಾರಣ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆದರು. ಬೆಳಗ್ಗೆ 10.30ಕ್ಕೆ ಪರೀಕ್ಷೆ ನಿಗದಿಯಾಗಿದ್ದರೂ 9ಕ್ಕೆ ಪಾಲಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಬೈಕ್, ಕಾರುಗಳಲ್ಲಿ ಕರೆತಂದು ಬಿಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ಪರೀಕ್ಷೆ ಮುಗಿಯುವವರೆಗೂ ಕಾದು ಮನೆಗೆ ಕರೆಯ್ದಯ್ದರು. ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಡಿಬಾರ್ ಆದ ಬಗ್ಗೆ ವರದಿಯಾಗಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts