More

    ಎ.ಮಂಜು, ಯೋಗಾ ರಮೇಶ್ ಉಮೇದುವಾರಿಕೆ

    ಅರಕಲಗೂಡು: ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಚ್. ಯೋಗಾ ರಮೇಶ್ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು. ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಟಿ. ಸತ್ಯನಾರಾಯಣ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಸುರೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.


    ಮಾಜಿ ಶಾಸಕ ರಾಮಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ಯೋಗಾರಮೇಶ್ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರಸಲ್ಲಿಸಿದ್ದು ಇವರ ಗೆಲುವಿಗೆ ಕಾರ್ಯಕರ್ತರೊಂದಿಗೆ ಒಗ್ಗೂಡಿ ಶ್ರಮಿಸಲಾಗುವುದು. ಪ್ರಧಾನಿ ನರೇಂದ್ರಮೋದಿ ಉತ್ತಮ ಆಡಳಿತ ನೀಡುತ್ತಿದ್ದು, ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಬಿಜೆಪಿ ನಾಯಕರ ಪಕ್ಷವಲ್ಲ, ಕಾರ್ಯಕರ್ತರ ಪಕ್ಷ. ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕಿದೆ ಎಂದರು.


    ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಒಂದೇ. ಇಲ್ಲಿ ಅಪ್ಪ ಜೆಡಿಎಸ್ ಆದರೆ ಕೊಡಗಿನಲ್ಲಿ ಮಗ ಕಾಂಗ್ರೆಸ್. ಇಂತಹ ಅಪವಿತ್ರ ಮೈತ್ರಿ ಬಗ್ಗೆ ಜನರು ಅರ್ಥಮಾಡಿ ಕೊಳ್ಳಬೇಕು ಎಂದು ಜೆಡಿಎಸ್ ಅಭ್ಯರ್ಥಿ ಎ.ಮಂಜು ವಿರುದ್ಧ ವಾಗ್ದಾಳಿ ನಡೆಸಿದರು. ಬೇರೆ ಪಕ್ಷದಲ್ಲಿ ಸೂಟ್ ಕೇಸ್ ಕೊಟ್ಟರೆ ಮಾತ್ರ ಪಕ್ಷದ ಟಿಕೆಟ್. ಈ ಕುರಿತು ಸಂಸದರೆ ನಮ್ಮ ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಎಂದು ಹರಿಹಾಯ್ದಿದ್ದರು. ಕಾಂಗ್ರೆಸ್ ಟಿಕೆಟ್ ಈ ವರೆಗೂ ಇತ್ಯರ್ಥವಾಗದಿರಲು ಸೂಟ್ ಕೇಸ್ ಕಾರಣವಾಗಿದೆ ಎಂದು ಆರೋಪಿಸಿದರು.
    ಬಿಜೆಪಿ ಅಭ್ಯರ್ಥಿ ಎಚ್. ಯೋಗಾರಮೇಶ್ ಮಾತನಾಡಿದರು. ಮುಖಂಡರಾದ ಬಿ.ಸಿ. ರಾಜೇಶ್, ಜನಾರ್ದನಗುಪ್ತ, ಲೋಕೇಶ್, ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಚಂದ್ರು ಇದ್ದರು.


    ಎ. ಮಂಜು ಉಮೇದುವಾರಿಕೆ: ಜೆಡಿಎಸ್ ಅಭ್ಯರ್ಥಿ ಎ. ಮಂಜು ತಮ್ಮ ಬೆಂಬಲಿಗರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು.
    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿದ್ದಕ್ಕೆ ಪಕ್ಷದ ವರಿಷ್ಠರು ಹಾಗೂ ತಾಲೂಕಿನ ಮುಖಂಡರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಕುಮಾರಣ್ಣನ ಶ್ರಮ ಹಾಗೂ ದೇವೇಗೌಡರ ಆಶೀರ್ವಾದದಿಂದ ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸೂರ್ಯನಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಸತೀಶ್, ಮುಖಂಡರಾದ ಲೋಕನಾಥ್, ಕೀರ್ತಿರಾಜ್, ಮುದ್ದನಹಳ್ಳಿ ರಮೇಶ್, ನಂಜುಂಡಸ್ವಾಮಿ ಇನ್ನಿತತರು ಇದ್ದರು.


    ಎಎಪಿ ಅಭ್ಯರ್ಥಿ ಉಮೇದುವಾರಿಕೆ: ಎಎಪಿ ಅಭ್ಯರ್ಥಿ ಬಿ.ಟಿ. ಜವರೇಗೌಡ ಅವರು ಸೋಮವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎಚ್.ಆರ್. ಸುರೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಪಟ್ಟಣದ ಅನಕೃ ವೃತ್ತದಿಂದ ಪೊರಕೆ ಹಿಡಿದು ಕುಣಿದು ಕುಪ್ಪಳಿಸಿದ ಎಎಪಿ ಕಾರ್ಯಕರ್ತರು ಅಭ್ಯರ್ಥಿ ಜವರೇಗೌಡ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts