More

    ಏಡ್ಸ್ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

    ಬಾಗಲಕೋಟೆ: ಎಚ್.ಐ.ವಿ/ಏಡ್ಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಾ ಪಸ್ತಾಪುರ ಹೇಳಿದರು.
    ನಗರದ ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ಗುರುವಾರ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಮಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಎಚ್.ಐ.ವಿ ಪೀಡಿತರನ್ನು ಸಮಾನವಾಗಿ ಕಾಣಬೇಕು. ಪ್ರಾರಂಭದಲ್ಲಿಯೇ ಪರೀಕ್ಷೆಗೆ ಒಳಪಡಿದಾಗ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಚಿಕತ್ಸೆಯಿಂದ ಗುಣಮುಖವಾಗಿ ಇರುವವರು ಇತರರಿಗೆ ಮಾದರಿಯಾಗಬೇಕು. ಅವರಲ್ಲಿ ಆತ್ಮಸ್ಥೆರ್ಯ ತುಂಬಬೇಕು. ತಾಯಿಗೆ ಎಚ್.ಐ.ವಿ ಬಂದಲ್ಲಿ ಅವಳ ಮಗ ಮನೆಯಿಂದ ಹೊರಹಾಕಿದ ಘಟನೆಗಳು ಜಿಲ್ಲೆಯಲ್ಲಿ ನಡೆದಿವೆ. ಆ ರೀತಿಯಾಗದಂತೆ ಜನರಲ್ಲಿ ಜಾಗೃತಿ ತರುವುದು ಅಗತ್ಯವಾಗಿದೆ ಎಂದು ತಿಳಿಸಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಮಾತನಾಡಿ, ಎಚ್.ಐವಿ ಕಂಡು ಬಂದ ರೋಗಿಗಳಲ್ಲಿ ಆತ್ಮ ಸ್ಥೈರ್ಯ ತುಂಬುವ ಕೆಲಸವಾಗಬೇಕು. ಕಳೆದ ೨೨ ವರ್ಷಗಳಿಂದ ಜಿಲ್ಲೆಯಲ್ಲಿ ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಶ್ರಮಿಸಲಾಗುತ್ತಿದೆ. ಎಲ್ಲ ರೀತಿಯ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಸಹ ಕೈಜೋಡಿಸಿದಾಗ ಈ ರೋಗ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಎಲ್ಲರೂ ಆರೋಗ್ಯವಂತರಾಗಿ ಬದುಕಬೇಕಾಗಿದೆ. ಪ್ರಸಕ್ತ ಸಾಲಿನಲ್ಲಿ ೯೧೮೬೯ ಜನರನ್ನು ಎಚ್‌ಐವಿ ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ ೫೭೦ ಜನರಲ್ಲಿ ಮಾತ್ರ ಪಾಜಿಟಿವ್ ಕಂಡುಬಂದಿರುವುದಾಗಿ ಹೇಳಿದರು.
    ಖಾಸಗಿ ವೈದ್ಯರಾದ ಡಾ.ಶೇಖರ ಮಾನೆ ಮಾತನಾಡಿ, ಕಳೆದ ೨೦ ವರ್ಷಗಳಿಂದ ಎಚ್.ಐವಿ ನಿಯಂತ್ರಣ ಕಾರ್ಯ ನಡೆಯುತ್ತಿದೆ. ಜನಸಾಮಾನ್ಯರಿಗೆ ಈ ರೋಗದ ಬಗ್ಗೆ ಅರಿವು ಮೂಡಿದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದಂತಾಗುತ್ತದೆ. ರೋಗಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯವಾಗಬೇಕು.
    ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಡಾ.ಶ್ರೀನಿವಾಸ ಪಾಟೀಲ ಅವರು ಎಚ್.ಐ.ವಿ ರೋಗದ ಲಕ್ಷಣ, ಹರಡುವಿಕೆ ಹಾಗೂ ನಿಯಂತ್ರಣದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಿಲೀಪ ನಾಟೆಕಾರ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಎಂ.ಎಚ್.ಸುಬೇದಾರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts