More

    ಐಗೂರು ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

    ಸೋಮವಾರಪೇಟೆ : ತಾಲೂಕಿನ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಸಂಘದ ವತಿಯಿಂದ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

    ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣ ಪಡೆಯಬೇಕು ಎಂದು ವಿಜ್ಞಾನ ಶಿಕ್ಷಕರಾದ ಎಸ್.ಎಸ್.ರಂಜಿನಿ ಹೇಳಿದರು. ಭಾರತ ಸಂವಿಧಾನದ 51(ಎಚ್)ವಿಧಿಯ ಮಹತ್ವ ತಿಳಿಸಿದರು. ಇದೇ ಸಂದರ್ಭದಲ್ಲಿ ಕುರಿತಾದ ಪ್ರತಿಜ್ಞಾವಿಧಿ ಬೋಧಿಸಿದರು.
    ಮುಖ್ಯಶಿಕ್ಷಕ ಎಂ.ಎಂ.ಯಶ್ವಂತ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ನಮ್ಮ ಶಾಲೆಯಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದರು.

    ಶಾಲಾ ಶಿಕ್ಷಕರಾದ ಎಸ್.ಕೆ.ರಾಜರತ್ನ, ಮಂಜುನಾಥ್, ಗುಲಾಬಿ ಇದ್ದರು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಉತ್ತಮ ಪ್ರಾತ್ಯಕ್ಷಿಕೆ ನೀಡಿದ ಮೂರು ತಂಡಗಳಿಗೆ ಬಹುಮಾನ ನೀಡಲಾಯಿತು.

    28ಎಸ್‌ಪಿಟಿ6:
    ಸೋಮವಾರಪೇಟೆ ತಾಲೂಕಿನ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಪ್ರದರ್ಶನ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts