More

    ಐಜಿಪಿಗೆ ತನಿಖೆ ಮೇಲ್ವಿಚಾರಣೆ ವಹಿಸಲಿ

    ಬೆಳಗಾವಿ: ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದ ತನಿಖಾ ಮೇಲ್ವಿಚಾರಣೆಯನ್ನು ಉತ್ತರ ವಲಯ ಐಜಿಪಿಗೆ ವಹಿಸಿಕೊಡಬೇಕು. ಈ ಸಂಬಂಧ ಸರ್ಕಾರಕ್ಕೆ ವಾರದೊಳಗೆ ವರದಿ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ಅಬ್ದುಲ್ ಅಜೀಂ ಆಗ್ರಹಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈನ ಸಮುದಾಯದ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ, ಐಜಿಪಿ ಮೇಲ್ವಿಚಾರಣೆಯಲ್ಲಿ ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲ ಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸ ಬೇಕು. ಮುಂದಿನ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಅಧಿ ಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

    ಅಲ್ಪಸಂಖ್ಯಾತರ ಹಕ್ಕುಗಳು, ಶಾಸನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಹಿತರಕ್ಷಣೆಯು ಆಯೋಗದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣ ತನಿಖೆ ಹಂತದಲ್ಲಿದ್ದು, ಪ್ರಕರಣದ ಪ್ರಮುಖ ಅಂಶಗಳ ಕುರಿತು ತನಿಖಾ ತಂಡದ ಜತೆಯೂ ಚರ್ಚೆ ನಡೆಸಲಾಗಿದೆ. ಕೊಲೆಯ ಉದ್ದೇಶ, ಸಾಕ್ಷೃ ನಾಶ ಪ್ರಯತ್ನ ಸೇರಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ತಿಳಿಸಲಾಗಿದೆ ಎಂದರು.

    ಜೈನಮುನಿ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಸಹಕರಿಸಿದವರು ಸೇರಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ನೀಡಿದವರ ಬಂಧನ ಆಗ ಬೇಕು. ಯಾವುದೇ ಸಂಸ್ಥೆ ತನಿಖೆ ಮಾಡಿದರೂ ಸರಿ. ತಪ್ಪಿತಸ್ಥರಿಗೆ ಶಿಕ್ಷೆ ಯಾಗಬೇಕು. ಅಲ್ಲದೆ, ಕಾಮಕುಮಾರ ನಂದಿ ಮಹಾರಾಜರ ಗುರುತು ಖಚಿತಪಡಿಸಿಕೊಳ್ಳಲು ಕೊಲೆಯಾ ಗಿರುವ ಜೈನ ಮತ್ತು ಅವರ ಸಂಬಂಧಿಗಳ ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ, ಅಲ್ಪಸಂಖ್ಯಾತರ ಆಗೋಗದ ಮಾಜಿ ನಿರ್ದೇಶಕ ಸುರೇಶ ತಂಗಾ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಬಿ. ಮಿರ್ಜಾನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts