More

    ಐದು ಸಾವಿರ ಜನರಿಂದ ಯೋಗ ಪ್ರದರ್ಶನ 21ಕ್ಕೆ 

    ದಾವಣಗೆರೆ: ಒಂಬತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ. 21ರಂದು ನಗರದ ಮೋತಿ ವೀರಪ್ಪ ಹೈಸ್ಕೂಲ್ ಮೈದಾನದಲ್ಲಿ 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಿದ್ಧತೆ ಕುರಿತು ಮಾತನಾಡಿದರು.
    ಈ ವರ್ಷವೂ ವಸುದೈವ ಕುಟುಂಬಕಂ ಧ್ಯೇಯದಡಿ ಪ್ರತಿ ಮನೆಯ ಅಂಗಳದಲ್ಲಿ ಯೋಗ ಎಂಬ ಘೋಷ ವಾಕ್ಯದಡಿ ಯೋಗಾಚರಣೆ ಮಾಡಲಾಗುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
    ಬೆಳಗ್ಗೆ 5.30 ರಿಂದ 6.30 ರವರೆಗೆ ಬ್ರಹ್ಮ ಕುಮಾರಿ ಸಂಸ್ಥೆಯಿಂದ ಧ್ಯಾನ, 7 ರಿಂದ 7.30 ಸಾಮಾನ್ಯ ಯೋಗ, 7.30 ರಿಂದ 8.30 ರವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. 8.30 ರಿಂದ 9 ರ ವರೆಗೆ ಉಪಾಹಾರ ಮತ್ತು 10 ಗಂಟೆವರೆಗೆ ಇತರೆ ಚಟುವಟಿಕೆಗಳು ನಡೆಯಲಿವೆ ಎಂದರು.
    ಕಳೆದ 9 ವರ್ಷಗಳಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆಗಳ ಮೂಲಕ ಯೋಗಾಸನ ತರಬೇತಿ ನೀಡಿದ ವಿವರ ಮತ್ತು ಜಿಲ್ಲೆಯಲ್ಲಿನ ಎಲ್ಲಾ ಜನರಿಗೂ ಯೋಗದ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರವನ್ನು ಸಂಗ್ರಹಿಸಲು ಡಿಸಿ ತಿಳಿಸಿದರು.
    ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ರಾಮಗೊಂಡ ಬಸರಗಿ, ಜಿಪಂ ಉಪ ಕಾರ್ಯದರ್ಶಿ ಕೃಷ್ಣ್ಣಾನಾಯ್ಕ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಶಂಕರಗೌಡ ಹಾಗೂ ವಿವಿಧ ಯೋಗ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts