More

    ಒಂದು ಹೊಸ ಶಂಕಿತ ಪ್ರಕರಣ ದಾಖಲು, ಬರಬೇಕಿದೆ ಇನ್ನೂ ಎರಡು ವರದಿ

    ಧಾರವಾಡ: ಜಿಲ್ಲೆಯಲ್ಲಿ ಭಾನುವಾರ ಮತ್ತೋರ್ವ ಕರೊನಾ ಶಂಕಿತ ವ್ಯಕ್ತಿ ಪತ್ತೆಯಾಗಿದ್ದು, ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಶಿವಮೊಗ್ಗ ಕೇಂದ್ರಕ್ಕೆ ಕಳುಹಿಸಲಾಗಿದೆ.

    ಈವರೆಗೆ ಒಟ್ಟು 44 ಶಂಕಿತ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 41 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ ಇಬ್ಬರ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ. ಒಬ್ಬ ವ್ಯಕ್ತಿಯ ವರದಿ ಪಾಸಿಟಿವ್ ಬಂದಿದ್ದು, ಹುಬ್ಬಳ್ಳಿ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 489 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 180 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡ್​ಗಳಲ್ಲಿ 3 ಜನ ದಾಖಲಾಗಿದ್ದಾರೆ. 274 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 32 ಜನರು 28 ದಿನಗಳ ಪ್ರತ್ಯೇಕ ವಾಸವನ್ನು ಪೂರ್ಣಗೊಳಿಸಿದ್ದಾರೆ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.</

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts