More

    ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬೇಡಿ

    ಬಾಗಲಕೋಟೆ:ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.
    ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, ಸಂವಿಧಾನದಲ್ಲಿ ಭಾರತದ ಭಾಷಾ ನೀತಿ ರಚಿಸಲಾಗಿದೆ. ದೇಶದಲ್ಲಿ ಎಲ್ಲ 22 ಭಾಷೆಗಳಿಗೂ ಪ್ರಮುಖ ಆದ್ಯತೆ ನೀಡಲಾಗಿದೆ. ಆದರೇ ಹಿಂದಿ ಭಾಷೆಯನ್ನು ರಾಷ್ಟ್ರೀಯ ಭಾಷೆಯಾಗಿ ಬಿಂಬಿಸುತ್ತಿರುವುದು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಿಂದಿ ಭಾಷಿಕರಿಗೆ ನೌಕರಿ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಪ್ರಾದೇಶಿಕ ಭಾಷೆ ಮತ್ತು ದಕ್ಷಿಣ ಭಾರತದ ರಾಜ್ಯಗಳ ಜನರಿಗೆ ಉದ್ಯೋಗದಲ್ಲಿ ವಂಚನೆ ಮಾಡುತ್ತಿರುವುದು ದೇಶಕ್ಕೆ ಮಾಡಿದ ದ್ರೋಹ. ಭಾಷೆ ಹೆಸರಿನಲ್ಲಿ ಒಕ್ಕೂಟ ವ್ಯವಸ್ಥೆ ಒಡೆಯುವ ಪ್ರಯತ್ನ ಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ 22 ಭಾಷೆಗಳನ್ನು ಆಡಳಿತ ಭಾಷೆಯಾಗಿ ಜಾರಿಗೊಳಿಸಿ ಆದೇಶಿಸಬೇಕು. ಶಿಕ್ಷಣ, ಉದ್ಯೋಗದಲ್ಲಿ ಎಲ್ಲ ಭಾಷಿಕರಿಗೆ ಸಮಾನವಾದ ಅವಕಾಶ ನೀಡಬೇಕು. ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾದಂತಹ ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು. ಹಿಂದಿ ದಿವಸ್ ಆಚರಣೆ ಬಂದ್ ಮಾಡಬೇಕು. ದೇಶದ ಯಾವುದೇ ಭಾಷೆಯನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಆಗ್ರಹಿಸಿದರು.
    ಮುಖಂಡರಾದ ಭಾಗ್ಯ ಬೆಟಗೇರಿ, ಆತ್ಮಾರಾಮ ನೀಲನಾಯಕ, ಬಸವರಾಜ ಅಂಬಿಗೇರ, ಯಲ್ಲಪ್ಪ ಹೆಗಡೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts