More

    ಒಗ್ಗಟ್ಟಾಗುವ ನಿಮ್ಮ ಹಕ್ಕು ಪಡೆದುಕೊಳ್ಳಿ

    ಯಾದಗಿರಿ: ಮನುಕುಲದ ಉದ್ಧಾರಕ್ಕಾಗಿ ಭೂಮಿಯ ಮೇಲೆ ಅವತರಿಸಿದ ಶ್ರೀಕೃಷ್ಣ ಪರಮಾತ್ಮನ ಸಿದ್ದಾಂತಗಳನ್ನು ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

    ಬುಧವಾರ ನಗರದ ರಾಯಲ್ ಗ್ರೀನ್ ಗಾರ್ಡನ್ ಸಭಾಂಗಣದಲ್ಲಿ ಜಿಲ್ಲಾ ಗೊಲ್ಲ, ಯಾದವ ಸಮಾಜದಿಂದ ಇದೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾಭಾರತದಲ್ಲಿ ಧರ್ಮ, ಅಧರ್ಮದ ಮಧ್ಯೆ ಸಂಘರ್ಷ ಏರ್ಪಟ್ಟಾಗ ಕೃಷ್ಣ ಅಜರ್ುನನಿಗೆ ಧಮರ್ೋಪದೇಶ ಮಾಡುವ ಮೂಲಕ ಜಯ ಗಳಿಸಿಕೊಟ್ಟ. ನೀವೆಲ್ಲ ಅಂಥ ಮಹಾತ್ಮನ ಕುಲಬಾಂಧವರು ಎಂದರು.

    ಯಾದವ ಸಮಾಜದ ಜನಸಂಖ್ಯೆ ಕಡಿಮೆ ಇದೆ. ನಮ್ಮನ್ನು ರಾಜಕೀಯವಾಗಿ ಕಡೆಗಣಿಸಲಾಗುತ್ತಿದೆ ಎಂದು ಭಾವಿಸಬೇಡಿ. ಸಮುದಾಯದ ಮುಂದೆ ನಮ್ಮ ಸರಕಾರ ಇದೆ. ನಿಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಮುಂದೆ ತನ್ನಿ. ಸಮುದಾಯ ಏಳಿಗೆಗಾಗೊ ಒಗ್ಗಟ್ಟಾಗುವ ಮೂಲಕ ನಿಮ್ಮ ಹಕ್ಕುಗಳನ್ನು ಪಡೆದುಕೊಳ್ಳಿ. ಸಮಾಜದವರ ಅನುಕೂಲಕ್ಕಾಗಿ ಸಮುದಾಯ ಭವನ ಬೇಕು ಎಂಬ ಬೇಡಿಕೆ ಕೇಳಿ ಬಂದಿದ್ದು, ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಿಎ ಸೈಟ್ ಸಿಕ್ಕರೆ ಕಟ್ಟಡ ನಿಮರ್ಾಣಕ್ಕಾಗಿ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts