More

    ಒಗ್ಗಟ್ಟಿನ ಹೋರಾಟದಿಂದ ಗೆಲುವು

    ಪಾಂಡವಪುರ: ಕಾಂಗ್ರೆಸ್, ರೈತ ಸಂಘ ನಾಯಕರು ಮತ್ತು ಕಾರ್ಯಕರ್ತರ ಒಗ್ಗಟ್ಟಿನ ಹೋರಾಟದಿಂದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಗೆಲುವು ಸಾಧಿಸಿದರು ಎಂದು ಕೆಪಿಸಿಸಿ ಸದಸ್ಯ ಎಚ್.ತ್ಯಾಗರಾಜು ಹೇಳಿದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ ಅಂಗವಾಗಿ ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ವಿತರಿಸಿ ಮಾತನಡಿದರು.

    ಸಿದ್ದರಾಮಯ್ಯ ಹಾಗೂ ಡಿಕೆಶಿ ಸೂಚನೆಯಂತೆ ಸ್ಥಳೀಯ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟಿನಿಂದ ರೈತ ಸಂಘ ಕಾರ್ಯಕರ್ತರ ಜತೆಗೂಡಿ ಹೋರಾಟ ನಡೆಸಿದ ಪ್ರತಿಫಲವಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಗೆಲುವು ಸಾಧಿಸಿದ್ದಾರೆ. ನೂತನ ಶಾಸಕರು ಕಾಂಗ್ರೆಸ್ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಲಿ. ನಾವೆಲ್ಲ ಒಂದೇ ಮನಸ್ಸಿನಿಂದ ಜೊತೆಯಾಗಿರುತ್ತೇವೆ ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಜಿಲ್ಲೆಯ ಕಾಂಗ್ರೆಸ್ ನಾಯಕರಾದ ಚೆಲುವರಾಯಸ್ವಾಮಿ ಸೇರಿದಂತೆ ಅನೇಕ ನಾಯಕರು ಶ್ರಮಪಟ್ಟಿದ್ದಾರೆ. ಜೆಡಿಎಸ್ ಭದ್ರಕೋಟೆ ಛಿದ್ರವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿ ಮಾರ್ಪಡಾಗಿದೆ. ಇದು ಇತ್ತೀಚಿನ ಎಲ್ಲ ಚುನಾವಣೆಗಳಲ್ಲಿ ಸಾಬೀತಾಗಿದೆ. ಜಿಲ್ಲೆಯ 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಈ ಹಿಂದಿನ ವಿಧಾನ ಪರಿಷತ್ ಚುನಾವಣೆಗಳಲ್ಲಿ ದಿನೇಶ್ ಗೂಳಿಗೌಡ ಹಾಗೂ ಮಧು ಜಿ.ಮಾದೇಗೌಡ ಗೆಲುವು ಸಾಧಿಸಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಬಲವಾಗಿ ಬೆಳೆದಿದೆ ಎಂದು ತಿಳಿಸಿದರು.

    ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ. ಇದಕ್ಕೆ ರಾಜ್ಯ ನಾಯಕರಾದ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರ ಪರಿಶ್ರಮ ಕಾರಣವಾಗಿದೆ. ನೂತನ ಶಾಸಕರು ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಲಿ ಎಂದರು.

    ಟಿಎಪಿಸಿಎಂಎಸ್ ನಿರ್ದೇಶಕ ಚಿಕ್ಕಾಡೆ ಶ್ರೀಕಾಂತ್, ಕಿಸಾನ್ ಘಟಕದ ರಾಜ್ಯ ಉಪಾಧ್ಯಕ್ಷ ಕುಬೇರ, ಬೆಳ್ಳಾಳೆ ಯೋಗೇಶ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಆಶಾ ಲವಕುಮಾರ್, ಯುವ ಘಟಕದ ಅಧ್ಯಕ್ಷ ಭರತ್ ಪಟೇಲ್, ಕಣಿವೆ ರಾಮು, ಅಂತನಹಳ್ಳಿ ಬಸವರಾಜು, ಪುರಸಭೆ ಸದಸ್ಯ ಉಮಾಶಂಕರ್, ಕೆನ್ನಾಳು ತಮ್ಮೇಗೌಡ, ದೀಪು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts