More

    ಒತ್ತಡಗಳಿಗೆ ಮಣಿಯದೇ ಕೆಲಸ ಮಾಡಿ

    ಶಿಡ್ಲಘಟ್ಟ: ಯಾವುದೇ ಒತ್ತಡಗಳಿಗೆ ಮಣಿಯಬೇಡಿ. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಶಾಸಕ ವಿ.ಮುನಿಯಪ್ಪ ಸೂಚಿಸಿದರು.

    ತಾಪಂ ಸಭಾಂಗಣದಲ್ಲಿ ಸೋಮವಾರ ಟಾಸ್‌‌ಕೆೆರ್ಸ್ ಸಮಿತಿ ಪ್ರಗತಿ ಪರಿಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಸೋಂಕಿನ ಬಗ್ಗೆ ನಿರ್ಲ್ಯಕ್ಷ್ಯ ಮಾಡದೆ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ತಾಲೂಕಿನಲ್ಲಿ ಇದುವರೆಗೂ 6000 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, 170 ಮಂದಿಗೆ ಪಾಸಿಟಿವ್ ಬಂದಿದೆ. ಈಗ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ರ‌್ಯಾಪಿಡ್ ಆ್ಯಂಟಿಜನ್ ಕಿಟ್ ಮೂಲಕ ಪ್ರತಿದಿನ ಕನಿಷ್ಠ 25 ಮಂದಿಗೆ ಪರೀಕ್ಷೆ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯಿತಿಗಳಿಗೆ ಮತ್ತು ನಗರದ ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.

    ಟಾಸ್ಕ್ ಫೋರ್ಸ್ ಸದಸ್ಯರು ಅಥವಾ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯ ಮಾಹಿತಿ ಪಡೆಯಬೇಕು, ಹಾಗೂ ವರದಿ ನೀಡಬೇಕೆಂದು ಸೂಚಿಸಿದರು.

    ತಾಪಂ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಒ ಬಿ.ಶಿವಕುಮಾರ್, ವಿವಿಧ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts