More

    ಒತ್ತುವರಿ ತೆರವಿಗೆ ಯೋಜನೆ

    ಗದಗ: ಗದಗ-ಬೆಟಗೇರಿ ಅವಳಿ ನಗರದ ಜನರ ಹಿತರಕ್ಷಣೆಗೆ ನಗರಸಭೆ ಸದಾ ಸಿದ್ಧವಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗದಂತೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಉಷಾ ದಾಸರ ಹೇಳಿದರು.

    ಅವಳಿ ನಗರದಲ್ಲಿ ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಂಜುನಾಥ ನಗರ, ಗಂಗಿಮಡಿ, ಭಜಂತ್ರಿ ಓಣಿ, ಮೂಲ ಮಾರುತಿ ದೇವಸ್ಥಾನದ ಹತ್ತಿರದ ಮನೆಗಳಿಗೆ ತಹಸೀಲ್ದಾರ್ ಕಿಶನ್ ಕಲಾಲ್ ಹಾಗೂ ನಗರಸಭೆ ಕಿರಿಯ ಇಂಜಿನಿಯರರೊಂದಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮಳೆ ನೀರಿನಿಂದಾಗಿ ಹಾನಿಗೊಳಗಾಗಿರುವ ಕುರಿತು ಪಾರದರ್ಶಕ ಸಮೀಕ್ಷೆ ನಡೆಸಿ ಅರ್ಹ ಕುಟುಂಬಗಳಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ ಒದಗಿಸುವಂತೆ ಹಾಗೂ ಅವಶ್ಯವಿರುವೆಡೆ ಕಾಳಜಿ ಕೇಂದ್ರ ತೆರೆಯಲು ಸೂಚಿಸಲಾಗಿದೆ ಎಂದರು.

    ಅವಳಿ ನಗರದಲ್ಲಿನ ರಾಜ ಕಾಲುವೆ ಒತ್ತುವರಿ, ಅವೈಜ್ಞಾನಿಕ ಒಳಚರಂಡಿ ಹಾಗೂ ಸಣ್ಣ ಗಟಾರು ನಿರ್ವಣದಿಂದಾಗಿ ನೂರಾರು ಮನೆಗಳಿಗೆ ಮಳೆ ನೀರು ನುಗ್ಗುತ್ತಿದೆ. ಒತ್ತುವರಿ ತೆರವು ಸೇರಿದಂತೆ ಶಾಶ್ವತ ಪರಿಹಾರಕ್ಕಾಗಿ ನಗರಸಭೆ ಅಧಿಕಾರಿಗಳೊಂದಿಗೆ ರ್ಚಚಿಸಿ ಯೋಜನೆ ರೂಪಿಸಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ, ಗಟಾರು ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ ಎಂದರು.

    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ ಮಾತನಾಡಿ, ಅವಳಿ ನಗರದ ಅಭಿವೃದ್ಧಿಯಲ್ಲಿ ಶಾಸಕರ ಸಮನ್ವಯದ ಕೊರತೆ ಎದ್ದು ಕಾಣಿಸುತ್ತಿದೆ. ರಾಜ ಕಾಲುವೆಗಳಿಗೆ ಹೆಚ್ಚುವರಿ ನೀರು ಬಂದಿರುವುದರಿಂದ ಮನೆಗಳಿಗೆ ನೀರು ನುಗ್ಗಿದೆ. ರಾಜ ಕಾಲುವೆಗಳು ಹಾದು ಹೋಗಿರುವಲ್ಲಿ ಮಾತ್ರ ಇಂತಹ ಸಮಸ್ಯೆಗಳು ಉದ್ಭವಿಸುತ್ತಿದ್ದು, ರಾಜ ಕಾಲುವೆಗಳ ಸ್ವಚ್ಛತೆಗೆ ಕ್ರಿಯಾ ಯೋಜನೆ ರೂಪಿಸಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

    ಸುದ್ದಿಗೋಷ್ಠಿಯಲ್ಲಿ ಹೈಸ್ಕೂಲ್ ಸಮಿತಿ ಅಧ್ಯಕ್ಷ ಮಹಾಂತೇಶ ನಲವಡಿ, ನಗರಸಭೆ ಸದಸ್ಯರಾದ ಚಂದ್ರಶೇಖರ ತಡಸದ, ಮುತ್ತಣ್ಣ ಮುಶಿಗೇರಿ, ವಿಜಯಲಕ್ಷ್ಮಿ ದಿಂಡೂರ, ಲಕ್ಷ್ಮೀ ಕಾಕಿ ಇತರರು ಇದ್ದರು.

    ನಗರಸಭೆಯ 15ನೇ ಹಣಕಾಸು, ಎಸ್​ಎಫ್​ಸಿ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ. ಅಲ್ಲದೆ, ಅವಳಿ ನಗರದ ಕಚ್ಚಾ ರಸ್ತೆಗಳ ಅಭಿವೃದ್ಧಿಗಾಗಿ ವಾರ್ಷಿಕ ನಿರ್ವಹಣೆ ಟೆಂಡರ್ ಕರೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
    | ಉಷಾ ದಾಸರ, ನಗರಸಭೆ ಅಧ್ಯಕ್ಷೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts