More

    ಒಳಮೀಸಲಾತಿಗೆ ತಾರ್ಕಿಕ ಅಂತ್ಯ: ನಾರಾಯಣಸ್ವಾಮಿ ಚಲವಾದಿ

    ವಿಜಯಪುರ : ಒಳಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಚಲವಾದಿ ಹೇಳಿದರು.
    ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಕುರಿತು ಸರ್ಕಾರ ಸ್ಪಂದಿಸುವ ಭರವಸೆ ಇದೆ. ಇನ್ನೂ ‘ದಲಿತ ಸಿಎಂ’ ಕೂಗು ಇಂದು ನಿನ್ನೆಯದಲ್ಲ, ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ಸಿಎಂ ಆಗುತ್ತಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಭಾರತೀಯ ಜನತಾ ಪಕ್ಷ ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿಯಲ್ಲ. ಕಾಂಗ್ರೆಸ್ ದಲಿತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ ದಲಿತರಿಗೆ ಈ ಬಗ್ಗೆ ಅರಿವಾಗಿದ್ದು, ದಲಿತ ಸಮುದಾಯ ಬಿಜೆಪಿ ಪರವಾಗಿ ನಿಂತಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ತನ್ನ ಶಕ್ತಿ ಕಳೆದುಕೊಂಡು ಹತಾಶವಾಗಿದೆ. ಎಲ್ಲಿಯೂ ಕಾಂಗ್ರೆಸ್‌ಗೆ ನೆಲೆ ಇಲ್ಲದಂತಾಗಿದೆ. ಹೀಗಾಗಿ ಬಿಜೆಪಿಗೆ ರಾಜ್ಯದಲ್ಲಿ ಪರ್ಯಾಯ ರಾಜಕೀಯ ಪಕ್ಷವೇ ಇಲ್ಲದಂತಾಗಿದೆ ಎಂದರು.
    ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ಮುಖಂಡರಾದ ಚಿದಾನಂದ ಚಲವಾದಿ, ಈಶಪ್ಪ ಹಿರೇಮನಿ, ದಿನಕರ ಬಾಬು, ಮುತ್ತಣ್ಣ ಸಾಸನೂರ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts