More

    ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸಿ

    ಚಿತ್ರದುರ್ಗ: ಕಟ್ಟಡ ಕಟ್ಟುವ, ಕಲ್ಲು ಒಡೆಯುವ, ಕ್ವಾರಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಎಐಟಿಯುಸಿ ಕಾರ್ಯಕರ್ತರು, ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ನೋಂದಾಯಿತ ಕಟ್ಟಡ ಕಾರ್ಮಿಕರ ಮದುವೆ ಸಹಾಯಧನ 60 ಸಾವಿರ ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಬೇಕು. ನೋಂದಾಯಿತ ಮಹಿಳಾ ಕಟ್ಟಡ ಕಾರ್ಮಿಕರಿಗೆ ಹೆರಿಗೆ ಸಹಾಯಧನ 50 ಸಾವಿರ ರೂ. ಠೇವಣಿ ಇಡುವ ಬದಲು ಫಲಾನುಭವಿ ಖಾತೆಗೆ ನೇರ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

    ಖಾಲಿ ನಿವೇಶನ ಖರೀದಿಸಿ, ವಸತಿ ಸೌಲಭ್ಯ ಕಲ್ಪಿಸಿಕೊಳ್ಳಲು 5 ಲಕ್ಷ ರೂ.ಗೆ ಮಂಜೂರಾತಿ ನೀಡಬೇಕು. ಇಎಸ್‌ಐ ಸೌಲಭ್ಯ, ನಿವೃತ್ತಿ ಪಿಂಚಣಿ 60 ವರ್ಷದ ಬದಲಿಗೆ 55 ವರ್ಷಕ್ಕೆ ಘೋಷಿಸಿ, ಮಾಸಿಕ 5 ಸಾವಿರ ರೂ. ಪಾವತಿಸಬೇಕು ಎಂದು ಕೋರಿದರು.

    ಮುಖಂಡರಾದ ಜಿ.ಸಿ.ಸುರೇಶ್‌ಬಾಬು, ಟಿ.ಆರ್.ಉಮಾಪತಿ, ಬಿ.ರಾಜಣ್ಣ, ಸತ್ಯಕೀರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts