More

    ಕಡ್ಡಾಯವಾಗಿ ಮತದಾನ ಮಾಡಿ


    ಯಾದಗಿರಿ: ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ಅಭಿಪ್ರಾಯಪಟ್ಟರು.
    ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿನ ಈಜುಕೊಳದಲ್ಲಿ ಮತದಾನ ಜಾಗೃತಿ ಅಂಗವಾಗಿ ಆಯೋಜಿಸಿದ್ದ ವಿಕಲಚೇತನರ ಈಜುವ ಸ್ಪಧರ್ೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಕುರಿತು ಪಾರದರ್ಶಕತೆ ಹಾಗೂ ಮತದಾನದಲ್ಲಿ ಸಕ್ರಿಯ ಭಾಗವಹಿಸುವಿಕೆಯಿಂದ ಮಾತ್ರ ದೇಶವನ್ನು ಮತ್ತಷ್ಟು ಗಟ್ಟಿಗೊಳಿಸಬಹುದು ಎಂದರು.
    ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಮತದಾನವಾಗಿಲ್ಲ. ಯುವ ಮತದಅರರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ನಿಮ್ಮ ಒಂದು ಮತ ಇಡೀ ದೇಶ, ರಾಜ್ಯದ ಅಭಿವೃದ್ಧಿಗೆ ಪ್ರೇರಣೆಯಾಗಲಿದೆ. ಸಂವಿಧಾನದಲ್ಲಿ ನಿಮಗೆ ನೀಡಿದ ಈ ಪವಿತ್ರ ಹಕ್ಕನ್ನು ಚಲಾಯಿಸುವುದು ನಿಮ್ಮೆಲ್ಲರ ಆದ್ಯ ಕರ್ತವ್ಯ ಕೂಡಾ ಆಗಿದೆ ಎಂದು ಸಲಹೆ ನೀಡಿದರು.
    ಜಿಲ್ಲಾ ಸ್ವೀಪ್ ಕಮಿಟಿ ಅಧ್ಯಕ್ಷರೂ ಆದ ಜಿಪಂ ಸಿಇಒ ಗರಿಮಾ ಪನ್ವಾರ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ನಾನಾ ಚಟುವಟಿಕೆಗಳ ಮುಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದರಲ್ಲಿ ಸಮುದಾಯದ ಸಹಭಾಗಿತ್ವ ಕೂಡಾ ಅಷ್ಟೇ ಪ್ರಮುಖವಾಗಿದೆ ಎಂದು ಹೇಳಿದರು.
    ಕ್ರೀಡಾ ಇಲಾಖಾಕಾರಿ ರಾಜು ಬಾವಿಹಳ್ಳಿ,ಸಿದ್ದರೆಡ್ಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts