More

    ಕನಕದಾಸರ ಜಯಂತಿ

    ಚಿತ್ರದುರ್ಗ: ಜಿಲ್ಲಾಡಳಿತದಿಂದ ನಗರದ ತರಾಸು ರಂಗಮಂದಿರದಲ್ಲಿ ನ.30ರ ಮಧ್ಯಾಹ್ನ 1ಗಂಟೆಗೆ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಸಮಾರಂಭವನ್ನು ಏರ್ಪಡಿಸಲಾಗಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿ ಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
    ವಿಶೇಷ ಆಹ್ವಾನಿತರಾಗಿ ರಾಜ್ಯವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ ಭಾಷಾ, ಮುಖ್ಯಅತಿಥಿಗಳಾಗಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ಕಾರ‌್ಯದರ್ಶಿ ಬಿ.ಟಿ.ಜಗದೀಶ್ ಮೊದಲಾದ ಗಣ್ಯರು ಭಾಗವಹಿಸುವರು. ಅಕ್ಕಮಹಾದೇವಿ ವಿವಿ ವಿಶ್ರಾಂತ ಕುಲಪತಿ ಸುನಂದಮ್ಮ ಉಪನ್ಯಾಸ ನೀಡುವರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಆಯಿತೋಳು ವಿರೂಪಾಕ್ಷಪ್ಪ ತಂಡ ಗೀತ ಗಾಯನ ನಡೆಸಿಕೊಡಲಿದೆ.
    ಸಮಾರಂಭದ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ನಗರದ ಕನಕವೃತ್ತದಿಂದ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್‌ಬಿಎಂ ವೃತ್ತ, ಒನಕೆ ಓಬವ್ವ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿನಾಯಕ ವೃತ್ತದ ಮೂಲಕ ತರಾಸು ರಂಗಮಂದಿರದವರೆಗೆ ವಿವಿಧ ಜಾನಪದ ಕಲಾ ತಂಡಗಳೊಂ ದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts