More

    ಕನಿಷ್ಠ ವೇತನ ಜಾರಿಗೊಳಿಸಲಿ

    ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

    ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಇಎಸ್‌ಐ, ಪಿಎಫ್, ಪಿಂಚಣಿ ಇತರ ಸೌಲಭ್ಯ ಕೊಡಬೇಕು. ನಮಗೆ ಗ್ರಾೃಚುಟಿ ಕೊಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಜಾರಿ ಮಾಡಬೇಕು. ಏಕರೂಪ ಸೇವಾ ನಿಯಮ ರೂಪಿಸಬೇಕು. ಸಂಘಟನೆ ಮಾಡಿದ ಮತ್ತು ಮುಷ್ಕರಗಳಲ್ಲಿ ಭಾಗವಹಿಸಿದ ಕಾರಣಕ್ಕಾಗಿ ದೆಹಲಿಯಲ್ಲಿ ಕಾನೂನು ಬಾಹಿರವಾಗಿ ಕೆಲಸದಿಂದ ವಜಾ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕೂಡಲೇ ಮರು ನೇಮಕ ಮಾಡಬೇಕು. ಪೋಷಣ್ ಅಭಿಯಾನಕ್ಕೆ ಆಧಾರ್ ಅಥವಾ ಫೋನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಆದೇಶ ಹಿಂಪಡೆಯಬೇಕು. ಪರಿಣಾಮಕಾರಿಯಾಗಿ ಕೆಲಸ ಮಾಡಲು ಗುಣಮಟ್ಟದ ಮೊಬೈಲ್ ನೀಡಬೇಕು ಹಾಗೂ ಹಂತಹಂತವಾಗಿ ಮೊಬೈಲ್‌ಗಳ ಬದಲಾಗಿ ಟ್ಯಾಬ್ ನೀಡಬೇಕು. ಇತರ ಇಲಾಖೆಗಳ ಕೆಲಸಗಳನ್ನು ಕಾರ್ಯಕರ್ತೆಯರಿಗೆ ವಹಿಸಬಾರದು ಎಂದು ಒತ್ತಾಯಿಸಿದರು. ಜಿ.ವಿ.ಕುಲಕರ್ಣಿ, ಮಂದಾ ನೇವಗಿ, ಸಂಧ್ಯಾ ಕುಲಕರ್ಣಿ, ಶೋಭಾ ತಳವಾರ, ಮೀನಾಕ್ಷ ದಫಡೆ, ಶೈಲಜಾ ಕುಲಕರ್ಣಿ, ಗುಲಾಬಿ ಗುರ್ಜರ, ಕೃಷ್ಣಾ ತೋಪಿನಕಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts