More

    ಕನಿಷ್ಠ ವೇತನ ಸಿಗುವಂತೆ ಜಾಗ್ರತೆವಹಿಸಿ

    ಚಿತ್ರದುರ್ಗ: ಕನಿಷ್ಠ ವೇತನ ಕಾಯ್ದೆ ಅಡಿ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ, ದಾವಣಗೆರೆ ವ್ಯಾಪ್ತಿಯಲ್ಲಿ ಕೇವಲ 4 ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ಇದು ಅಧಿಕಾರಿಗಳ ನಿರ್ಲಿಪ್ತ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಎಸ್ ಲಾಡ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

    ಶುಕ್ರವಾರ ಜಿಪಂ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಬಾಲಕಾರ್ಮಿಕ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ. ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ. ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ, ಕಾರ್ಖಾನೆಗಳಿಗೆ ಹಾಗೂ ಕಾರ್ಯ ಕ್ಷೇತ್ರಗಳಿಗೆ ತೆರಳಿ ಪರಿಶೀಲಿಸಬೇಕು. ಮಾಲೀಕರು ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ ಈವರೆಗೂ ವಾಣಿಜ್ಯ ಬಳಕೆಗಾಗಿ 23,597 ವಿದ್ಯುತ್ ಪರವಾನಿಗೆ ನೀಡಲಾಗಿದೆ. ಮಾಸಿಕ 400 ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿಗೆ ಗುರಿ ನಿಗದಿಪಡಿಸಲಾಗಿದೆ. ಅಕ್ಟೋಬರ್‌ನಲ್ಲಿ ಕೇವಲ 286 ಆಗಿದ್ದು, ನಿರ್ಲಕ್ಷೆ ತೋರಿದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಕಾಯ್ದೆ ವಿರುದ್ಧ ನಡೆದುಕೊಂಡಲ್ಲಿ ಪರವಾನಗಿ ರದ್ದುಪಡಿಸಲಾಗುದೆಂದು ಜಾಗೃತಿ ಮೂಡಿಸಿ ಎಂದು ಎಚ್ಚರಿಕೆ ನೀಡಿದರು.

    ಉದ್ಯೋಗ ಮೇಳ ಆಯೋಜಿಸಿ: ಆಕಾಶದೀಪ ಯೋಜನೆಯಡಿ ಎಸ್ಸಿ, ಎಸ್ಟಿ ಸಮುದಾಯದ ಕಾರ್ಮಿಕರ ಪಿಎಫ್ ಖಾತೆಗೆ ಹಣ ಜಮೆ, ಕಾರ್ಖಾನೆಗಳಲ್ಲಿ ಅಪ್ರೆಂಟಿಸ್ ತರಬೇತಿಗೆ ಸೇರಿಕೊಂಡರೆ ಕನಿಷ್ಠ ವೇತನ ಪಾವತಿ ಮಾಡಲಾಗುವುದು. ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೇಳ ಆಯೋಜಿಸಿ ಎಂದು ಸೂಚಿಸಿದರು. ಈಗಾಗಲೇ ಸಾರ್ವಜನಿಕರ ಅನುಕೂಲಕ್ಕಾಗಿ 24*7 ಸಹಾಯವಾಣಿ ಸಂಖ್ಯೆ 155214 ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆಯಲ್ಲಿ ಕಾರ್ಮಿಕರು ಮೊಬೈಲ್ ಸಂಖ್ಯೆ 9333333684 ವಾಟ್ಸ್ ಆ್ಯಪ್, ಟೆಲಿಗ್ರಾಂ ಮೂಲಕ ದೂರು ಸಲ್ಲಿಸಬಹುದು ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ 1,49,436 ಕಟ್ಟಡ ಕಾರ್ಮಿಕರು ನೋಂದಣಿಯಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಒಟ್ಟು 2,049 ಅರ್ಜಿ ಸ್ವೀಕರಿಸಲಾಗಿದೆ. 1,726ಕ್ಕೆ ಮಂಜೂರಾತಿ ನೀಡಲಾಗಿದೆ. 54 ಬಾಕಿ ಉಳಿದಿವೆ ಎಂದು ಅಂಕಿ-ಅಂಶ ಸಮೇತ ವಿವರಿಸಿದರು.

    ಇಲಾಖೆ ಆಯುಕ್ತ ಗೋಪಾಲಕೃಷ್ಣ, ಮಂಡಳಿಯ ಸಿಇಒ ಭಾರತಿ, ಕಾರ್ಮಿಕ ಇಲಾಖೆ ವಲಯದ ಹೆಚ್ಚುವರಿ ಆಯುಕ್ತ ಮಂಜುನಾಥ್, ಕಲಬುರ್ಗಿ ವಿಭಾಗದ ಉಪ ಆಯುಕ್ತ ವೆಂಕಟೇಶ್ ಶಿಂದಿಹಟ್ಟಿ, ಕಾರ್ಖಾನೆ ಮತ್ತು ಬಾಯ್ಲರ್ ವಿಭಾಗದ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts