More

    ಕನ್ನಡದಲ್ಲಿ ವ್ಯವಹರಿಸುವ ಸರ್ಕಾರದ ಆದೇಶ ಪಾಲಿಸಿ

    ದೇವದುರ್ಗ: ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಗ್ರಾಮೀಣ ಭಾಗದ ರೈತರು, ಕೂಲಿಕಾರರು, ಬಡವರು ಹೆಚ್ಚಿನ ಪ್ರಮಾಣದಲ್ಲಿ ಖಾತೆ ಹೊಂದಿದ್ದು, ಬ್ಯಾಂಕ್‌ಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳಿಗೆ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೂಚಿಸಿದರು.

    ಪಟ್ಟಣದ ಮಿನಿವಿಧಾನಸೌಧದಲ್ಲಿ ಆಯೋಜಿಸಿದ್ದ ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರ ಸಭೆಯಲ್ಲಿ ಗುರುವಾರ ಮಾತನಾಡಿದರು. ರಾಷ್ಟ್ರೀಕೃತ ಮತ್ತು ಪ್ರಾದೇಶಿಕ ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಕಡಿಮೆಯಾಗುತ್ತಿದ್ದು, ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಶೇ.60 ಕನ್ನಡ ನಾಮಫಲಕಗಳನ್ನು ಬಳಸಿ ಕನ್ನಡದಲ್ಲಿ ವ್ಯವಹರಿಸಬೇಕು ಎಂದು ಸರ್ಕಾರದ ಕಟ್ಟುನಿಟ್ಟಿನ ಆದೇಶವಿದೆ. ಈ ಆದೇಶವನ್ನು ಬ್ಯಾಂಕ್ ಅಧಿಕಾರಿಗಳು ಪಾಲಿಸಬೇಕು ಎಂದು ಸೂಚಿಸಿದರು.

    ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ್ ಮಾತನಾಡಿ, ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಶೇ.60 ಮತ್ತು ರಾಜ್ಯ ಸರ್ಕಾರದ ಇಲಾಖೆಗಳಲ್ಲಿ 100 ಕನ್ನಡದಲ್ಲಿ ವ್ಯವಹಾರ ನಡೆಸಬೇಕು. ಕನ್ನಡ ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಸಹಕರಿಸಬೇಕು. ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ನಿರ್ಲಕ್ಷ್ಯ ಮಾಡುವ ಸಿಬ್ಬಂದಿ ವಿರುದ್ಧ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts