More

    ಕನ್ನಡದ ರಕ್ಷಣೆ ಕನ್ನಡಿಗರ ಹೊಣೆ


    ಚಾಮರಾಜನಗರ : ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಎಸ್‌ಡಿಎ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಭಾಷಾ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


    ಕೊಳ್ಳೇಗಾಲ ದೊಡ್ಡಿಂದುವಾಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಆನಂದರಾಜ್ ಮಾತನಾಡಿ, ಕನ್ನಡದ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನದ್ದು. ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಅನೇಕ ಮಹನೀಯರನ್ನು ನೆನಪಿಸಿಕೊಳ್ಳಬೇಕಿದೆ ಎಂದರು.


    ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ಭವ್ಯಪರಂಪರೆಯನ್ನು ತಿಳಿಸಲಾಗಿದೆ. ನಮ್ಮ ನಾಡು, ನುಡಿ, ಸಂಸ್ಕೃತಿ ಉತ್ತರದ ಗೋದಾವರಿಂದ ದಕ್ಷಿಣದ ಕಾವೇರಿ ನದಿಯವರೆಗೆ ಹಬ್ಬಿತ್ತು. ಆದರೆ, ಕನ್ನಡ ನಾಡು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಾಹಿತ್ಯದ ಹಿರಿಮೆಯನ್ನು ನಾವೆಲ್ಲರೂ ಅರಿತು ಬದುಕಬೇಕು. ಕನ್ನಡ ಸೇವೆಗಾಗಿ ಕಂಕಣ ಭದ್ಧರಾಗಿ ದುಡಿಯಬೇಕು ಎಂದು ಸಲಹೆ ನೀಡಿದರು.


    ಎಸ್‌ಡಿಎ ಸಂಸ್ಥೆಯ ಪ್ರಾಂಶುಪಾಲ ಕಿರಣ್‌ಕುಮಾರ್ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಶಿವಸ್ವಾಮಿ, ಶಿಕ್ಷಕರಾದ ಪುಟ್ಟರಾಜು, ನೀಲವೇಣಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts