More

    ಕನ್ನಡಾಂಭೆ ಮೆರವಣಿಗೆಯಲ್ಲಿ ಗ್ಯಾರಂಟಿ ಸ್ಪಬ್ದಚಿತ್ರ


    ಚಿತ್ರದುರ್ಗ: ಕರ್ನಾಟಕ ಏಕೀಕರಣದ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ಬಾರಿ ನವೆಂಬರ್ 1ರಂದು ರಾಜ್ಯೋತ್ಸವ ಸಮಾರಂಭವನ್ನು ಹೆಚ್ಚು ವಿ ಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಸೂಚಿಸಿದರು.

    ಡಿಸಿ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 7.30ಕ್ಕೆ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ ನಗರದ ನೀಲಕಂಠೇಶ್ವರ ದೇವಾಲಯದಿಂದ ಪೊಲೀಸ್ ಮೈದಾನದ ವರೆಗೆ ನಡೆಯಲಿದೆ. ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ವಿವಿಧ ವೈವಿಧ್ಯಮಯ ಜಾ ನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ವಿವಿಧ ಇಲಾಖೆಗಳ ಹಾಗೂ ಗ್ಯಾರಂಟಿಗಳ ಸ್ತಬ್ಧಚಿತ್ರಗಳು ಇರಲಿವೆ ಎಂದರು.

    ಬೆಳಗ್ಗೆ 9ಕ್ಕೆ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಮೈದಾನದಲ್ಲಿ ಹಾಗೂ ಸಂಜೆ ತರಾಸು ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ‌್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

    ಸಮಾರಂಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ. ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯಪುರಾಣಿಕರ ಹೊತ್ತಿತೋ ಹೊತ್ತಿತು ಕನ್ನಡದ ದೀಪ ಹಾಗೂ ಚನ್ನವೀರ ಕಣವಿ ಅವರು ಬರೆದಿರುವ ಹೆಸರಾಯಿತು ಕರ್ನಾಟಕ ಉಸಿರಾಗಲಿ, ಗೀತೆಗಳನ್ನು ಹಾಡಬೇಕಿದೆ. ಜಿಲ್ಲೆಯ ವಿವಿಧೆಡೆ ನಡೆಯುವ ರಾಜ್ಯೋತ್ಸವ ಸಂದರ್ಭದಲ್ಲಿ ಈ ಗೀತೆಗಳ ಗಾಯನ ಕಡ್ಡಾಯ ಎಂದು ಹೇಳಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತೀಕ್, ನಗರಸಭೆ ಪೌರಾಯುಕ್ತೆ ರೇಣುಕಾ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ತೋಟಗಾರಿಕೆ ಇಲಾಖೆ ಡಿಡಿ ಸವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಭಾರತಿ ಬಣಕಾರ್ ಇತರರಿದ್ದರು.

    ಜಿಲ್ಲಾ ಪ್ರಶಸ್ತಿ ಪ್ರದಾನ
    ಕನ್ನಡ ರಾಜ್ಯೋತ್ಸವದ ಜಿಲ್ಲಾಮಟ್ಟದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುತ್ತದೆ. ಇದಕ್ಕಾಗಿ ಅರ್ಹರು ಅ.30ರ ಮಧ್ಯಾಹ್ನ 12.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಮಾಜ ಸೇವೆ, ಸಾಹಿತ್ಯ, ಸಂಗೀತ, ಕಲೆ (ರಂಗಭೂಮಿ), ಜಾನಪದ, ಪರಿಸರ ಸಂರಕ್ಷಣೆ, ಕೃಷಿ, ಕ್ರೀಡೆ, ವಿಜ್ಞಾನ ತಂತ್ರಜ್ಞಾನ ಸಂಶೋಧನೆ, ವೈದ್ಯಕೀಯ, ಅಂಗವಿಕಲರ ಕ್ರೀಡೆ, ಚಿತ್ರಕಲಾ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಸಾಧಕರು ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತರಾಸು ರಂಗಮಂದಿರ ಆವರಣ, ಚಿತ್ರದುರ್ಗ. ಇಲ್ಲಿಗೆ ಅರ್ಜಿ ಸಲ್ಲಿಸಬಹುದು.

    ಕ್ರೀಡಾಪಟುಗಳಿಗೆ ಸನ್ಮಾನ
    ಅಂತಾರಾಷ್ಟ್ರೀಯ ಮಟ್ಟದ (2022-23ನೇ ಸಾಲು) ಅಂಗೀಕೃತ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳನ್ನು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಅಂಗವಿಕಲ, ಸಾಮಾನ್ಯ ಕ್ರೀಡಾಪಟುಗಳಿಗೆ ತಲಾ ಒಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕ್ರೀಡಾಪಟುಗಳು ಸ್ವವಿವರ ಮತ್ತು ದಾಖಲೆಗಳನ್ನು ಅ.26ರ ಸಂಜೆ 4 ಗಂಟೆಯೊಳಗೆ ಸಹಾಯಕ ನಿರ್ದೇಶಕ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿತ್ರದುರ್ಗ. ಇಲ್ಲಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts