More

    ಕನ್ನಡ ಜ್ಯೋತಿ ರಥಯಾತ್ರೆ ಸ್ವಾಗತಕ್ಕೆ ಅಗತ್ಯ ಸಿದ್ಧತೆ

    ಯಾದಗಿರಿ: ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀಷರ್ಿಕೆಯಡಿ ಡಿ.22 ರಿಂದ ಜ.03ರ ವರೆಗೆ ಜಿಲ್ಲಾದ್ಯಂತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಆಗಮಿಸಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಹೇಳಿದರು.

    ಶನಿವಾರ ನಗರದ ಕಸಾಪ ಭವನದಲ್ಲಿ ಕರೆದಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ 6 ತಾಲೂಕುಗಳ ವಿವಿಧ ಸ್ಥಳಗಳ ಮೂಲಕ ಕನ್ನಡ ನಾಡು ನುಡಿಯ, ಸಾಂಸ್ಕೃತಿಕ ಪರಂಪರೆ, ಇತಿಹಾಸ ಮತ್ತು ಕನ್ನಡದ ಮಹತ್ವವನ್ನು ಸಾರಿ ಹೇಳುವ ವಿಶೇಷ ಜ್ಯೋತಿ ರಥಯಾತ್ರೆ ಇದಾಗಿದೆ. ಆಯಾ ತಾಲೂಕಿನ ತಹಸೀಲ್ದಾರರು, ತಾಪಂ ಇಒ, ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಿಡಿಒ ಸಾಹಿತ್ಯ ಪರಿಷತ್ತು, ಕನ್ನಡಪರ ಸಂಘಟನೆಗಳು ಸೇರಿ ಯಾತ್ರೆಗೆ ಸಂಭ್ರಮದ ಸ್ವಾಗತ, ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.

    ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಚೆನ್ನಬಸಪ್ಪ ಕುಳಿಗೇರಿ ಮಾತನಾಡಿ, ಜಿಲ್ಲೆಯ ಎಲ್ಲ ಕಾಲೇಜಿನ ವಿದ್ಯಾರ್ಥಿಗಳನ್ನು ಭಾಗವಹಿಸಲು ಪ್ರಾಚಾರ್ಯರಿಗೆ ಸೂಚನೆ ನೀಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಯುವಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತ್ತರಾದೇವಿ, ಪ್ರತಿ ತಾಲೂಕಿನಲ್ಲಿ ಈ ಜ್ಯೋತಿ ರಥಯಾತ್ರೆ ಸಂಚರಿಸಲಿದ್ದು ಎರಡು ಸ್ಥಳಿಯ ಕಲಾ ತಂಡಗಳನ್ನು ಆಯೋಜನೆ ಮಾಡಲು ಪ್ರಯತ್ನಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts