More

    ಕನ್ನಡ ಬೆಳವಣಿಗೆಗೆ ಕರವೇ ಕಾರ್ಯ ಶ್ಲಾಘನೀಯ

    ಯಾದಗಿರಿ : ಕನ್ನಡ ಕಟ್ಟುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಪೀಠಾಧಿಪತಿ ಶ್ರೀ ಡಾ.ಗಂಗಾಧರ ಸ್ವಾಮೀಜಿ ಹೇಳಿದರು.

    ತಾಲೂಕಿನ ಅಬ್ಬೆತುಮಕೂರಿನ ಶ್ರೀ ವಿಶ್ವಾರಾಧ್ಯ ಮಠದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ಕರವೇಯಿಂದ ಆಯೋಜಿಸಿರುವ ಗಿರಿನಾಡ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಕನ್ನಡ ನೆಲ, ಜಲ, ಭಾಷೆ ಕುರಿತು ಹಲವು ಹೋರಾಟ ಮಾಡುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಮಾತನಾಡಿ, ನ.೨೪ರಂದು ಸಂಜೆ ೫ಕ್ಕೆ ಯಾದಗಿರಿಯ ಪಂಪ ಮಹಾಕವಿ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಡಾ.ಗಂಗಾಧರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ಪ ದರ್ಶನಾಪುರ ಹಾಗೂ ಮಾಜಿ ಸಚಿವ ನರಸಿಂಹನಾಯಕ (ರಾಜುಗೌಡ) ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಶರಣಗೌಡ ಕಂದಕೂರ, ಚನ್ನಾರಡ್ಡಿ ಪಾಟೀಲ್ ತುನ್ನೂರ ಸೇರಿ ಹಲವರು ಭಾಗವಹಿಸಲಿದ್ದಾರೆ ಎಂದರು.

    ನಬಿಲಾಲ್ ಮಕನದಾರ ಅಮ್ಮಾಪುರ (ಸಾಹಿತ್ಯ ಕ್ಷೇತ್ರ), ಅಯ್ಯಣ್ಣ ಹಾಲಭಾವಿ (ಸಂಘಟನೆ), ಎಸ್.ಎಸ್.ಮಠ (ಮಾಧ್ಯಮ), ಹೊನ್ನಪ್ಪ ಬಂದಳ್ಳಿ (ನಾಟಿ ವೈದ್ಯ), ಕು.ಪಲ್ಲವಿ ಪಾಟೀಲ್ (ಕ್ರೀಡೆ ಕ್ಷೇತ್ರ)ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
    ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ವಿಶ್ವಾರಾಧ್ಯ ದಿಮ್ಮೆ, ಅಂಬರೀಶ್ ಹತ್ತಿಮನಿ, ಸಂತೋಷ ನಿರ್ಮಲಕರ, ಸಾಹೇಬಗೌಡ ಗೌಡಗೇರಾ, ಯಮನಯ್ಯ ಗುತ್ತೇದಾರ್, ಸಿದ್ದಪ್ಪ ಕೊಯಿಲೂರು, ಅರ್ಜುನ ಪವಾರ, ಸಿದ್ದಪ್ಪ ಕ್ಯಾಸಪನಳ್ಳಿ, ಭೀಮರಾಯ ರಾಮಸಮುದ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts