More

    ಕನ್ನಡ ರಥಯಾತ್ರೆಗೆ ಅದ್ದೂರಿ ಸ್ವಾಗತ

    ಬಾಗಲಕೋಟೆ: ಕರ್ನಾಟಕ ಎಂದು ಮರು ನಾಮಕರಣವಾಗಿ ೫೦ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಯಾತ್ರೆ ಮಂಗಳವಾರ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದಾಗ ಅದ್ದೂರಿಯಾಗಿ ಸ್ವಾಗತಿಸಲಾಯಿತು.

    ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕನ್ನಡ ಜ್ಯೋತಿ ಯಾತ್ರೆಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತುಂಬರಮಟ್ಟಿ, ತಹಶೀಲ್ದಾರ ಅಮರೇಶ ಪಮ್ಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ನಗರಸಭೆ ಪೌರಾಯುಕ್ತ ರಮೇಶ ಜಾದವ ಸೇರಿದಂತೆ ಇತರೆ ಅಧಿಕಾರಿಗಳು ಕನ್ನಡಾಂಬೆಗೆ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು.

    ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಕರ್ನಾಟಕ ಸಂಭ್ರಮ-೫೦ರ ಹಿನ್ನಲೆಯಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಅರಿವು ಮೂಡಿಸುವ ಉದ್ದೇಶದಿಂದ ಸರಕಾರ ಕನ್ನಡ ಜ್ಯೋತಿ ಯಾತ್ರೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.

    ನಂತರ ನಗರದ ನಾನಾ ಕಡೆಗಳಲ್ಲಿ ಜ್ಯೋತಿ ರಥಯಾತ್ರೆ ಸಂಚರಿಸಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು, ಛದ್ಮವೇಷಧಾರಿ ಮಕ್ಕಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts