More

    ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ಬೇಡ

    ಲಕ್ಷ್ಮೇಶ್ವರ: ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಗುರುತಿಸಲ್ಪಟ್ಟಿರುವ ಕಪ್ಪತಗುಡ್ಡದಲ್ಲಿ ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಕನ್ನಡ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ವತಿಯಿಂದ ಶುಕ್ರವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

    ವೇದಿಕೆಯ ತಾಲೂಕು ಅಧ್ಯಕ್ಷ ಇಲಿಯಾಸ್ ಮೀರಾನವರ ಮತ್ತು ನಗರ ಘಟಕದ ಅಧ್ಯಕ್ಷ ಮಹೇಶ ಕಲಘಟಗಿ ಮಾತನಾಡಿ, ಕಪ್ಪತಗುಡ್ಡ ಗದಗ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿದೆ. ಗುಡ್ಡದಿಂದಾಗಿ ಈ ಭಾಗದಲ್ಲಿ ಮಳೆಯಾಗುತ್ತದೆ. ಆದರೆ, ಗಣಿಗಾರಿಕೆ ಶುರುವಾದರೆ ಕೆಲವೇ ವರ್ಷಗಳಲ್ಲಿ ಇಡೀ ಗುಡ್ಡ ಮಾಯವಾಗಿ ಮೂರೂ ಜಿಲ್ಲೆಗಳ ಜನತೆಗೆ ದೊಡ್ಡ ಆಪತ್ತು ಬರುತ್ತದೆ. ಅಮೂಲ್ಯವಾದ ಅಪಾರ ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿಗೆ ವಿಪತ್ತು ಬರಲಿದೆ. ಕಾರಣ ಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದರು.

    ಕಂದಾಯ ನಿರೀಕ್ಷಕ ಎಸ್.ಎಸ್. ಪಾಟೀಲ ಮನವಿ ಸ್ವೀಕರಿಸಿದರು. ಬಸವರಾಜ ಅಂಕಲಕೋಟಿ ಇದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts