More

    ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು

    ರಾಮನಗರ :  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷೃಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಗುರುವಾರ ಪ್ರತಿಭಟನೆ ನಡೆಸಿದರು.
    ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷೃಕರ ಸಂಘದ ಈಗಾಗಲೇ ತರಬೇತಿಗಳನ್ನು ಬಹಿಷ್ಕಾರ ಮಾಡಿತ್ತು, ಆದರೆ ಇದಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಕಪ್ಪುಪಟ್ಟಿ ಧರಿಸಿ ಹೋರಾಟ ಮುಂದುವರಿಸಲು ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಘದ ನೀಡಿದ್ದ ಕರೆ ಮೇರೆಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷೃಕರು ತೋಳಿಗೆ ಕಪ್ಪುಪಟ್ಟಿ ಧರಿಸಿ ತರಗತಿಗಳಲ್ಲಿ ಪಾಠ ಪ್ರವಚನದಲ್ಲಿ ತೊಡಗಿದರು.

    ಈ ಪ್ರತಿಭಟನೆ ಇನ್ನು ಒಂದು ವಾರ ಮುಂದುವರಿಸಲಿದ್ದಾರೆ.ಪದವೀಧರ ಸಂಘದ ಶಿಕ್ಷೃಕರ ಸಮಸ್ಯೆ ಈಡೇರಿಸುವುದು. ವಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷೃಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯಶಿಕ್ಷಕರಿಗೆ 15, 20, 25 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕಪಾಂಕ ಶಿಕ್ಷೃಕರ ಸಮಸ್ಯೆ, ದೈಹಿಕ ಶಿಕ್ಷೃಣ ಶಿಕ್ಷೃಕರು ಹಾಗೂ ಹಿಂದಿ ಶಿಕ್ಷೃಕರ ಸಮಸ್ಯೆಗಳು ಸೇರಿ ಶಿಕ್ಷೃಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂಬುದು ಶಿಕ್ಷಕರ ಬೇಡಿಕೆಯಾಗಿದೆ.

    ಈ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಶಿಕ್ಷೃಕರು ಇಂದಿನಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಕರೋನಾ ಸೋಂಕಿನಿಂದ ಬೋಧನೆ ಕುಂಠಿತವಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಶಿಕ್ಷೃಕರು ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ. ಸರ್ಕಾರ ಶಿಕ್ಷಕರ ಶಾಂತಿಯುತ ಪ್ರತಿಭಟನೆಗೂ ಜಗ್ಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು

    ಕಾರ್ಯಾಗಾರ ಬಹಿಷ್ಕಾರ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಬಹಿಷ್ಕರಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಗುರುವಾರ ಪ್ರತಿಭಟನೆ ನಡೆಸಿದರು.
    ತಾಲೂಕು ಅಧ್ಯಕ್ಷ ನೇ.ರ.ಪ್ರಭಾಕರ ಮಾತನಾಡಿ, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವವರೆಗೂ ಮಕ್ಕಳೊಂದಿಗೆ ನಿರಂತರ ಹೋರಾಟ ಮುಂದುವರೆಸುವುದಾಗಿ ತುರ್ತು ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಪದವೀಧರ ಶಿಕ್ಷಕರ ಸಮಸ್ಯೆಗಳು, ವರ್ಗಾವಣೆ, ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ಧತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಸಹ ಇಂದಿಗೂ ಅನೇಕ ಸಮಸ್ಯೆಗಳನ್ನು ಸರ್ಕಾರ ಈಡೇರಿಸಲು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್, ಜಿಲ್ಲಾಧ್ಯಕ್ಷ ರಮೇಶ್, ತಾಲೂಕು ಉಪಾಧ್ಯಕ್ಷರಾದ ಟಿ.ವಿ.ಪ್ರಶಾಂತ್‌ಬಾಬು, ಕಾರ್ಯದರ್ಶಿ ವೈ.ಸಿ.ನಟರಾಜ್, ಖಜಾಂಚಿ ಕೆ.ಎಂ.ರಮೇಶ್, ಪದಾಧಿಕಾರಿಗಳಾದ ಜೆ.ಡಿ.ಚಂದ್ರಾವತಿ, ಗಂಗಸ್ವಾಮಿ, ಗೀತಾ, ಲಕ್ಷ್ಮಿಕುಮಾರ್, ಶಶಿಕಲಾ ಮತ್ತಿತರರು ಇದ್ದರು.

    ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೂ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಹೋರಾಟ ಅನಿವಾರ್ಯವಾಗಿದೆ. ನಮ್ಮ ಹೋರಾಟ ಸಾಂಕೇತಿಕವಾಗಿವಾಗಿದ್ದು, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಪಡೆಯಲಿದೆ.
    ರಮೇಶ್ ಅಧ್ಯಕ್ಷ, ಜಿಲ್ಲಾ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts