More

    ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

    ಮೈಸೂರು: ಬಣ್ಣಾರಿ ಸಕ್ಕರೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ ರೈತರಿಗೆ ನೀಡಬೇಕಾಗಿರುವ ಹಿಂದಿನ ವರ್ಷದ ಬಾಕಿ 150 ರೂ.ಗಳನ್ನು ತಕ್ಷಣವೇ ಪಾವತಿಸಬೇಕು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.


    ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಬಾಕಿ ಹಣ ಶೀಘ್ರ ಪಾವತಿಸಲು ಕಾರ್ಖಾನೆ ಮಾಲೀಕರಿಗೆ ಸೂಚಿಸುವಂತೆ ಜಿಲ್ಲಾಧಿಕಾರಿ ಅವರನ್ನು ಒತ್ತಾಯಿಸಿದರು. ಕಬ್ಬಿನ ಉತ್ಪಾದನೆ ವೆಚ್ಚ ಏರಿಕೆಯಾಗಿದೆ. ಆದ್ದರಿಂದ ಹೆಚ್ಚು ಬೆಲೆ ನಿಗದಿಪಡಿಸಲು ರೈತರು ಹೋರಾಟದ ನಡೆಸಿದ ಪರಿಣಾಮ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 150 ರೂ. ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಕಳೆದ ವರ್ಷ ರೈತರು ಕಾರ್ಖಾನೆಗೆ 15 ಲಕ್ಷ ಟನ್ ಕಬ್ಬು ಪೂರೈಕೆ ಮಾಡಿದ್ದಾರೆ. ಆದರೂ ಇದುವರೆಗೂ ಬಾಕಿ ನೀಡಿಲ್ಲ. ಇದನ್ನು ಪಾವತಿಸಿದ ಬಳಿಕ ಕಾರ್ಖಾನೆ ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.


    ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕಬ್ಬಿನ ದರ ರೈತರಿಗೆ ಅನ್ಯಾಯವಾಗಿದೆ. ಪ್ರತಿ ಟನ್‌ಗೆ (9.5 ಇಳುವರಿ) 4 ಸಾವಿರ ರೂ. ನಿಗದಿಪಡಿಸಿದೆ. ಕಾರ್ಖಾನೆ ಪುನರಾರಂಭವಾಗುವುದಕ್ಕೆ ಮೊದಲು ಜಿಲ್ಲಾಧಿಕಾರಿ ಸಭೆ ಕರೆದು ಕಟಾವು ಕೂಲಿ, ಸಾಗಾಟ ವೆಚ್ಚ ನಿಗದಿಪಡಿಸಬೇಕು. ರಾಜ್ಯ ಸರ್ಕಾರ ಎಸ್‌ಎಪಿ ಸಭೆ ಕರೆದು ಕಬ್ಬು ಬೆಳೆಗಾರರಿಗೆ ರೈತರ ಹೊಲದಲ್ಲಿನ ದರ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.


    ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ನಡುವೆ ದ್ವಿಪಕ್ಷಿಯ ಒಪ್ಪಂದ ಪತ್ರ ವ್ಯವಸ್ಥೆ ಜಾರಿ ಮಾಡಿದ್ದು, ಅಂತೆಯೆ ಅದನ್ನು ಅನುಷ್ಠಾನಕ್ಕೆ ತರುವ ಮೂಲಕ ರೈತರಿಗೆ ಒಪ್ಪಂದ ಪತ್ರದ ಒಂದು ಪ್ರತಿ ಕೊಡಬೇಕು. ಸಕ್ಕರೆ ಕಾರ್ಖಾನೆ ಒಳಗೆ ಇರುವ ಕಬ್ಬು ತೂಕದ ಯಂತ್ರವನ್ನು ಕಾರ್ಖಾನೆ ಮುಂದೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.


    ಮುಖಂಡರಾದ ಅತ್ತಹಳ್ಳಿ ದೇವರಾಜ್, ಹಳ್ಳಿಕೆರೆಹುಂಡಿ ಭಾಗ್ಯರಾಜು, ಹಾಡ್ಯರವಿ, ಎಚ್.ಮಾಕಹಳ್ಳಿ ಮಹದೇವಸ್ವಾಮಿ, ಅಪ್ಪಣ್ಣ, ರಾಜೇಶ್ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts