More

    ಕರಂದ್ಲಾಜೆಗೆ ಅಕ್ಕನೆಂದು ಕರೆದುತಿರುಗೇಟು ನೀಡಿದ ಕುಸುಮಾ!

    ವಿಜಯವಾಣಿ ಸುದ್ದಿಜಾಲ ಬೆಂಗಳೂರು
    ಡಿ.ಕೆ.ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆಯದಾಗಲ್ಲ ಎಂಬ ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಕ್ಕೆ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿರುಗೇಟು ನೀಡಿದ್ದಾರೆ.
    ‘ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎನ್ನುವುದನ್ನು ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ ನೊಂದವರ ನೋವ ನೋಯದವರೆತ್ತ ಬಲ್ಲರೊ? ಎಂಬ ವಚನ ನೆನಪಿಗೆ ಬರುತಿದೆ’ ಎಂದು ಕರಂದ್ಲಾಜೆಯವರನ್ನು ಉದ್ದೇಶಿಸಿ ಲೇವಡಿ ಮಾಡಿದ್ದಾರೆ.
    ‘ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ! ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು’ ಎಂದಿದ್ದಾರೆ.
    ಡಿ.ಕೆ.ರವಿ ಮೃತಪಟ್ಟ ಸಂದರ್ಭದಲ್ಲಿ ಬಿಜೆಪಿ ಮತ್ತು ಶೋಭಾ ಕರಂದ್ಲಾಜೆ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು. ಈ ವಿಚಾರವನ್ನು ಪ್ರಸ್ತಾಪಿಸದೇ ಕುಸುಮಾ ಶೋಭಾರನ್ನು ಕುಟುಕಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts