More

    ಕರಾವಳಿಯಲ್ಲಿ ಸಾಮಾನ್ಯ ಮಳೆ

    ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಂಗಳವಾರ ಮೋಡ, ಬಿಸಿಲಿನ ವಾತಾವರಣದ ಜತೆ ಸಾಮಾನ್ಯ ಮಳೆ ಸುರಿದಿದೆ.
    ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ವಿವಿಧೆಡೆ ಮಳೆಯಾಗಿದ್ದು, ಮಂಗಳೂರು ನಗರದಲ್ಲಿ ಒಂದೆರಡು ಬಾರಿ ತುಂತುರು ಮಳೆಯಾಗಿದೆ. ಕರಾವಳಿಯಲ್ಲಿ ಕ್ಷೀಣವಾಗಿರುವ ಮಳೆ ಮತ್ತೆ ಚುರುಕು ಪಡೆಯುವ ನಿಟ್ಟಿನಲ್ಲಿ ಮತ್ತೆ ಮೋಡಗಳು ನಿರ್ಮಾಣವಾಗುತ್ತಿದೆ. ಗುರುವಾರದಿಂದ ಕರಾವಳಿಯಲ್ಲಿ ಮತ್ತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಿನದ ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಸಿಯಸ್ 23.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ಉಡುಪಿ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಬಿಟ್ಟು ಬಿಟ್ಟು ಮಳೆಯಾಗಿದ್ದು, ಮಂಗಳವಾರ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದ ಸಾಯಂಕಾಲವರೆಗೆ ನಿರಂತರ ಮಳೆ ಸುರಿದಿದೆ.

    ಮತ್ತೊಂದು ಚಂಡಮಾರುತ?: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಉಂಟಾಗುವ ನಿಟ್ಟಿನಲ್ಲಿ ಪೂರಕ ವಾತಾವರಣ ನಿರ್ಮಾಣವಾಗುತ್ತಿದೆ. ಉತ್ತರ ಬಂಗಾಳಕೊಲ್ಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಜೂನ್ 11ರ ವೇಳೆಗೆ ಕಡಿಮೆ ಒತ್ತಡ ಪ್ರದೇಶವೊಂದು ನಿರ್ಮಾಣವಾಗಲಿದೆ. ಇದು ಮುಂದಕ್ಕೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts