More

    ಕರೊನಾ ಜಾಗೃತಿ ಜನಾಂದೋಲನ ವಾಹನಕ್ಕೆ ಚಾಲನೆ

    ರೋಣ: ಕರೊನಾ ವಿರುದ್ಧದ ಹೋರಾಟದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದರೆ ಸೋಂಕು ಹೊಡೆದೋಡಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ನಾಗಮಣಿ ಹೇಳಿದರು.

    ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಿ, ತಾಲೂಕು ಕಾನೂನು ಸೇವಾ ಸಮಿತಿ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕರೊನಾ ಜಾಗೃತಿ ಜನಾಂದೋಲನ ವಾಹನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಕರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

    ಸಿಪಿಐ ಸುನೀಲ ಸೌದಿ ಮಾತನಾಡಿ, ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆದುಕೊಳ್ಳುತ್ತಿರಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

    ಪ್ರಧಾನ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಯೂನಸ್ ಅಥಣಿ, ಎಚ್.ಆರ್. ಸಚಿನ್, ವಕೀಲರ ಸಂಘದ ಅಧ್ಯಕ್ಷ ಆರ್.ಎಸ್. ಮುಗಳಿ, ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎಂ. ಹಾದಿಮನಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts