More

    ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ

    ಗದಗ: ಗದಗ ಬೆಟಗೇರಿ ನಗರಸಭೆಯ ವಾರ್ಡ್ 31ರ ರಂಗನವಾಡಿ ಓಣಿ, ದತ್ತಾತ್ರೇಯ ಗುಡಿ, ಉರ್ದುಶಾಲೆ ಹಾಗೂ ಎಸ್.ಎಂ.ಕೆ ನಗರದ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಮುಂದಿನ ಆದೇಶದವರೆಗೆ ನಿಯಂತ್ರಿತ (ಕಂಟೇನ್ಮೆಂಟ್) ಪ್ರದೇಶವೆಂದು ಮತ್ತು ಈ ಪ್ರದೇಶದ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳತೆ ಪ್ರದೇಶವನ್ನು ಬಫರ್ ಜೋನ್ ಎಂದು ಘೊಷಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

    ಅಲ್ಲದೆ, ಗದಗ ಉಪ ವಿಭಾಗಾಧಿಕಾರಿ ಅವರನ್ನು ಇನ್ಸಿಂಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ. ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಗಳಿಗೆ ಕರ್ತವ್ಯನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಕಂಟೇನ್ಮೆಂಟ್ ಜೋನ್ ಸುತ್ತ ಘೊಷಣೆ ಮಾಡಲಾದ 5 ಕಿಮೀ ಬಫರ್ ಜೋನ್​ನ ಮೊದಲ 1 ಕಿ.ಮೀ ಸುತ್ತಳತೆಯ ವ್ಯಾಪ್ತಿಯಲ್ಲಿ ಮನೆ-ಮನೆಗೆ ತೀವ್ರ ಆರೋಗ್ಯ ಪರೀಕ್ಷೆಗಳು ಕಡ್ಡಾಯವಾಗಿ ನಡೆಸಲಾಗುತ್ತದೆ.

    ನಿಯಂತ್ರಿತ ವಲಯಗಳಲ್ಲಿ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡಬೇಕು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ವಿುಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಂದ ಹಂಚಲು ಅವಕಾಶವಿಲ್ಲ, ಈ ಪ್ರದೇಶಗಳ ಜನರು ಮನೆ ಬಿಟ್ಟು ಹೊರಗೆ ಹೋಗುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜ್, ಕಚೇರಿಗಳನ್ನು ಮುಚ್ಚಬೇಕು. ಜನಗುಂಪು ಸೇರುವುದು, ವಾಹನ ಸಂಚಾರವನ್ನು (ಕರ್ತವ್ಯ ನಿರತ ವಾಹನ ಹೊರತುಪಡಿಸಿ) ನಿರ್ಬಂಧಿಸಿದೆ.

    ನಿಯಂತ್ರಿತ ಪ್ರದೇಶದ ವ್ಯಾಪ್ತಿಯಲ್ಲಿ ಹಿಂದಿನ ಪಾಸಿಟಿವ್ ಪ್ರಕರಣ ವರದಿಯಾದ 28 ದಿನಗಳ ಅವಧಿಯಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣ ವರದಿಯಾಗದೇ ಇದ್ದಲ್ಲಿ ಅಥವಾ ಈ ಪ್ರದೇಶದಲ್ಲಿ ಹತ್ತಕ್ಕಿಂತ ಕಡಿಮೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳು ಗೃಹದಿಗ್ಬಂಧನದಲ್ಲಿ ಸಕ್ರಿಯವಾಗಿದ್ದರೆ ಆಗ ಆ ನಿಯಂತ್ರಿತ ವಲಯವು ಸಾಮಾನ್ಯ ವಲಯವಾಗಿ ಮತ್ತು ಬಫರ್ ಜೋನ್ ಸಾಮಾನ್ಯ ವಲಯವಾಗಿ ಬದಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಕಂಟೇನ್ಮೆಂಟ್, ಬಫರ್ ಜೋನ್ ಮತ್ತು ಕ್ಲಸ್ಟರ್​ಗಳಲ್ಲಿ ಕರೊನಾ ವೈರಸ್ ನಿಯಂತ್ರಿಸುವ ಕುರಿತು ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಇಲಾಖೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಕರ್ತವ್ಯಗಳನ್ನು ನಿಗದಿಪಡಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ- 2005 ರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ನಿರ್ದೇಶಿಸಲಾಗಿದೆ.

    598 ಜನರ ನಿಗಾ

    ಗದಗ ಜಿಲ್ಲೆಯ ಕೋವಿಡ್-19 ಪಿಡುಗು ತಡೆ ಕುರಿತ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭಾನುವಾರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಲ್ಲಿ 598 ಜನರು ನಿಗಾಕ್ಕೆ ಒಳಗಾಗಿದ್ದಾರೆ. 168 ಜನರು 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 409 ಜನರು ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿದ್ದಾರೆ. 20 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿ ಇರಿಸಲಾಗಿದೆ. ಸೋಂಕಿನ ಪರೀಕ್ಷೆಗಾಗಿ 509 ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಇದರಲ್ಲಿ 372 ನಕಾರಾತ್ಮಕವಾಗಿವೆ. 100 ವರದಿಗಳು ಬರಬೇಕಿದೆ. 34 ವರದಿಗಳು ತಿರಸ್ಕೃತಗೊಂಡಿವೆ. ಜಿಲ್ಲೆಯಲ್ಲಿ ಪಿ-166 ಹಾಗೂ ಪಿ-304, ಪಿ-370 ಒಟ್ಟು 3 ಕೋವಿಡ್ ಪ್ರಕರಣಗಳು ಎಂದು ಧೃಢಪಟ್ಟಿವೆ. ಪಿ-370 ಪ್ರಕರಣದ ಪ್ರಾಥಮಿಕ ಸಂಪರ್ಕದಲ್ಲಿದ್ದಂತಹ 5 ವರದಿಗಳ ಪೈಕಿ 4 ವರದಿಗಳು ನಕಾರಾತ್ಮಕವಾಗಿದ್ದು ಒಂದು ವರದಿ ಬರಲು ಬಾಕಿ ಇದೆ ಎಂದು ತಿಳಿಸಿದ್ದಾರೆ.ಗದಗದಲ್ಲಿ ಮೂರು ಪಾಸಿಟಿವ್ ಕರೊನಾ ಪ್ರಕರಣ ಪತ್ತೆಯಾದರೂ ಜನರ ಬೇಜವಾಬ್ದಾರಿ ಮುಂದುವರಿದಿದೆ. ಗದಗ ಬೆಟಗೇರಿ ಅವಳಿ ನಗರದ ಜನರಿಗೆ ಎಷ್ಟು ಹೇಳಿದರೂ ಜಾಗೃತಿ ಮೂಡಿದಂತೆ ಕಾಣಿಸುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ನಗರದ ಎಪಿಎಂಸಿ ತರಕಾರಿ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಗೆ ಮುಗಿಬಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸ್ಥಳದಲ್ಲಿದ್ದ ಪೊಲೀಸರು ಹೇಳಿದರೂ ಸ್ಪಂದಿಸದೇ ತಮ್ಮ ಕಾರ್ಯದಲ್ಲಿ ಮಗ್ನರಾಗಿದ್ದರು. ಕೆಲವರು ಮಾಸ್ಕ್ ಇಲ್ಲದೇ ಓಡಾಡುತ್ತಿದ್ದರು. ಭಾನುವಾರವಾಗಿದ್ದರಿಂದ ಮಾಂಸ ಮಾರ್ಕೆಟ್​ನಲ್ಲಿ ಜನರು ತುಂಬಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸ್ ಸಿಬ್ಬಂದಿಯಿಂದ ಸೂಚನೆ ನೀಡಿದರೂ ಕ್ಯಾರೇ ಅನ್ನುತ್ತಿರಲಿಲ್ಲ. ಭಾನುವಾರ ಮಟನ್ ಕೆಜಿಗೆ 700 ರೂ. ಚಿಕನ್ ಕೆಜಿಗೆ 200 ರೂ, ಫಿಶ್ ಕೆಜಿಗೆ 400 ರೂಪಾಯಿಗೆ ಮಾರಾಟವಾಯಿತು.

    ಗದಗದಲ್ಲಿ ಮೂರು ಪಾಸಿಟಿವ್

    ಕರೊನಾ ಪ್ರಕರಣ ಪತ್ತೆಯಾದರೂ ಜನರ ಬೇಜವಾಬ್ದಾರಿ ಮುಂದುವರಿದಿದೆ. ಗದಗ ಬೆಟಗೇರಿ ಅವಳಿ ನಗರದ ಜನರಿಗೆ ಎಷ್ಟು ಹೇಳಿದರೂ ಜಾಗೃತಿ ಮೂಡಿದಂತೆ ಕಾಣಿಸುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ನಗರದ ಎಪಿಎಂಸಿ ತರಕಾರಿ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಗೆ ಮುಗಿಬಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸ್ಥಳದಲ್ಲಿದ್ದ ಪೊಲೀಸರು ಹೇಳಿದರೂ ಸ್ಪಂದಿಸದೇ ತಮ್ಮ ಕಾರ್ಯದಲ್ಲಿ ಮಗ್ನರಾಗಿದ್ದರು. ಕೆಲವರು ಮಾಸ್ಕ್ ಇಲ್ಲದೇ ಓಡಾಡುತ್ತಿದ್ದರು. ಭಾನುವಾರವಾಗಿದ್ದರಿಂದ ಮಾಂಸ ಮಾರ್ಕೆಟ್​ನಲ್ಲಿ ಜನರು ತುಂಬಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸ್ ಸಿಬ್ಬಂದಿಯಿಂದ ಸೂಚನೆ ನೀಡಿದರೂ ಕ್ಯಾರೇ ಅನ್ನುತ್ತಿರಲಿಲ್ಲ. ಭಾನುವಾರ ಮಟನ್ ಕೆಜಿಗೆ 700 ರೂ. ಚಿಕನ್ ಕೆಜಿಗೆ 200 ರೂ, ಫಿಶ್ ಕೆಜಿಗೆ 400 ರೂಪಾಯಿಗೆ ಮಾರಾಟವಾಯಿತು.

    ಆಹಾರಕ್ಕಾಗಿ ಮಕ್ಕಳೊಂದಿಗೆ ಅಲೆದಾಟ

    ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಟಗೇರಿಯ ನರಸಾಪುರ ಕಾಲನಿಯ ಮಹಿಳೆಯೊಬ್ಬರು ಮಕ್ಕಳಿಗೆ ಆಹಾರ ಸಿಗದಿದ್ದಕ್ಕೆ ಮನೆಯಿಂದ ಹೊರಗೆ ಬಂದು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಕುಳಿತಿದ್ದು ಕಂಡುಬಂದಿತು. ಆಹಾರ ಹುಡುಕಿಕೊಂಡು ಮಕ್ಕಳೊಂದಿಗೆ ಹೊರಗೆ ಬಂದಿದ್ದ ಮಹಿಳೆಯ ರೋಧನೆ ಮನಕಲುಕುವಂತಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗೆರೆ ಅವರು ಮಹಿಳೆಗೆ ಆಹಾರದ ಕಿಟ್ ವಿತರಿಸಿ ಮನೆಗೆ ಕಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts