More

    ಕರೊನಾ ತಡೆಗೆ ಮುಂಜಾಗ್ರತೆ ಮದ್ದು

    ಹೊನ್ನಾವರ: ಕರೊನಾ ವೈರಸ್​ನಿಂದ ಹರಡುವ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗದ ಲಕ್ಷಣ ಆಧಾರಿತ ಚಿಕಿತ್ಸೆ ಮೂಲಕ ಸೋಂಕು ಗುಣಪಡಿಸಬಹುದಾದರೂ ಸೂಕ್ತ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಉಷಾ ಹಾಸ್ಯಗಾರ ಹೇಳಿದರು.

    ಪಟ್ಟಣದ ಎಂಪಿಇ ಸೊಸೈಟಿಯ ಎಸ್​ಡಿಎಂ ಪದವಿ ಕಾಲೇಜ್​ನ ವಿದ್ಯಾರ್ಥಿ ಒಕ್ಕೂಟ ಮತ್ತು ತಾಲೂಕು ಆಸ್ಪತ್ರೆಯ ಮಾಹಿತಿ ಸಂಪರ್ಕ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಕರೊನಾ ವೈರಸ್ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರೊನಾ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಆದ್ದರಿಂದ ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು. ವೈಯಕ್ತಿಕ ಮತ್ತು ಸಾಮೂಹಿಕ ನೈರ್ಮಲ್ಯ ಕಾಪಾಡಬೇಕು. ಅನಾರೋಗ್ಯದ ಲಕ್ಷಣವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಬೇಯಿಸದ ಮೊಟ್ಟೆ, ಮಾಂಸ ಸೇವನೆ ಮಾಡಬಾರದು. ಬಾಯಿಯನ್ನು ಒಣಗಲು ಬಿಡಬಾರದು, ಸುರಕ್ಷಿತ ನೀರನ್ನು ಕುಡಿಯಬೇಕು. ಹೆಚ್ಚು ಸೀನುವ ಮತ್ತು ಕೆಮ್ಮುವ ಲಕ್ಷಣಗಳು ಕಂಡುಬಂದ ತಕ್ಷಣ ಹತ್ತಿರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದರು.

    ಪ್ರಾಚಾರ್ಯು ಡಾ. ವಿಜಯಲಕ್ಮಿ್ಮೕ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಡಾ. ಎಂ.ಆರ್. ನಾಯಕ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾಧಿಕಾರಿ ಆನಂದ ಶೇಟ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts