More

    ಕರೊನಾ ತಡೆಗೆ ಲಸಿಕೆಯೊಂದೇ ಪರಿಹಾರ: ಶಾಸಕ ಡಾ.ಎಂ.ಬಿ. ಪಾಟೀಲ ಅಭಿಮತ

    ವಿಜಯಪುರ: ಮಹಾಮಾರಿ ಕರೊನಾ ನಿಯಂತ್ರಣಕ್ಕೆ ಲಸಿಕೆ ವಿತರಣೆಯೊಂದೇ ಪರಿಹಾರ ಎಂದು ಮಾಜಿ ಸಚಿವ, ಶಾಸಕ ಡಾ.ಎಂ.ಬಿ. ಪಾಟೀಲ ಅಭಿಪ್ರಾಯಿಸಿದ್ದಾರೆ.
    ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದಲ್ಲಿ ಮೊದಲನೇ ಅಲೆ ಮುಗಿದು ಎರಡನೇ ಅಲೆಯ ಹಾನಿ ಅನುಭವಿಸುತ್ತಿದ್ದು, 3ನೇ ಅಲೆ ಆತಂಕವೂ ಇದೆ. ಈಗಾಗಲೇ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಜೀವ ಹಾನಿ ತಡೆಯಲು ಲಸಿಕೆಯೊಂದೇ ಸದ್ಯಕ್ಕಿರುವ ಪರಿಹಾರ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದಿದ್ದಾರೆ.
    ಸರ್ಕಾರ ಪ್ರಧಾನಮಂತ್ರಿಗಳು, ರಾಜ್ಯ ಸರ್ಕಾರ ಮುಖ್ಯಮಂತ್ರಿಗಳು ಉಳಿದ ಎಲ್ಲ ವಿಷಯಗಳನ್ನು ಬದಿಗಿರಿಸಿ, ಅತೀ ಕಡಿಮೆ ಅವಧಿಯಲ್ಲಿ 100ಕೋಟಿ ಜನರಿಗೆ ವ್ಯಾಕ್ಸಿನೆಷನ್ ಮಾಡಿಸುವ ಅಭಿಯಾನವನ್ನು ಕೈಗೊಂಡು, ಅದಕ್ಕೆ ಎಲ್ಲ ಅಗತ್ಯ ನೆರವು ಒದಗಿಸಿ, ವಿಶೇಷ ಆದ್ಯತೆಯನ್ನು ನೀಡಬೇಕಾದ ತುರ್ತು ಅಗತ್ಯವಿದೆ. ಆಗ ಮಾತ್ರ ಈ ಸಮಸ್ಯೆಗೆ ಸಂಪೂರ್ಣ ಮತ್ತು ಶಾಶ್ವತ ಪರಿಹಾರ ಸಾಧ್ಯ.
    ಈಗಾಗಲೇ ಲಸಿಕೆ ಅಭಿಯಾನ ಮುಗಿಸಿರುವ ಅಮೆರಿಕಾ, ಇಸ್ರೇಲ್ ಮತ್ತಿತರ ಯೂರೋಪಿಯನ್ ರಾಷ್ಟ್ರಗಳು ಕರೊನಾದಿಂದ ಮುಕ್ತವಾಗಿ ಅಲ್ಲಿನ ಜನ-ಜೀವನ ಮುಂಚಿನಂತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆ ಮಾದರಿಯಲ್ಲಿ ಭಾರತದಲ್ಲಿಯೂ 130ಕೋಟಿ ಜನರಲ್ಲಿ ಕನಿಷ್ಠ 100 ಕೋಟಿ ಜನರನ್ನು ಗುರಿಯಾಗಿಸಿ, ಈ ಲಸಿಕೆ ಹಾಕಿಸಬೇಕು. ನಮ್ಮ ದೇಶದಲ್ಲಿಯೇ ಹೆಚ್ಚಿನ ಲಸಿಕೆ ಉತ್ಪಾದನೆ ಮಾಡಬೇಕು. ಅಗತ್ಯವಿರುವಷ್ಟು ಬೇರೆ ರಾಷ್ಟ್ರಗಳಿಂದ ಕೂಡ ಲಸಿಕೆ ಆಮದು ಮಾಡಿಕೊಂಡು, ಒಟ್ಟಾರೆ 100ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿ ನಮ್ಮ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts