More

    ಕರೊನಾ ತೊಲಗಿಸಲು ಸಹಕರಿಸಿ

    ನೇಸರಗಿ: ಕೋವಿಡ್ ಸಂಕಷ್ಟ ಕಾಲದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ವೈದ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಹಾಗೂ ಗ್ರಾಪಂ ನೌಕರರ ಕಾರ್ಯ ಶ್ಲಾಘನೀಯ ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.

    ಸಮೀಪದ ಹಣಬರಹಟ್ಟಿ ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಗ್ರಾಮದ ಎಲ್ಲ ವಾರ್ಡ್‌ಗಳಿಗೆ ವೈದ್ಯರು ಭೇಟಿ ನೀಡಿ, ಜನರ ಆರೋಗ್ಯ ಪರೀಕ್ಷಿಸುತ್ತಿದ್ದಾರೆ. ಕರೊನಾ ಸೋಂಕಿಗೆ ಹೋಲುವ ಲಕ್ಷಣ ಕಂಡುಬಂದರೆ, ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಕರೊನಾಗೆ ತುತ್ತಾದವರು ಧೈರ್ಯವಾಗಿರಬೇಕು. ಕರೊನಾ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದಣ್ಣವರ ಮಾತನಾಡಿ, ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿರುವವರು ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. 45 ವರ್ಷ ಮೇಲ್ಪಟ್ಟವರು ಯಾವುದೇ ಆತಂಕವಿಲ್ಲದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು. ಬೈಲಹೊಂಗಲ ತಹಸೀಲ್ದಾರ್ ಬಸವರಾಜ ನಾಗರಾಳ ಮಾತನಾಡಿ, ಜನರು ಲಾಕ್‌ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ತಾಪಂ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ಆರ್.ಜಿ.ಯಲಿಗಾರ, ಪಿಡಿಒ ಶಿವಾನಂದ ಕಲ್ಲೂರ, ಡಾ.ಸಂತೋಷ ಗೋವಿ, ಗ್ರಾಪಂ ಅಧ್ಯಕ್ಷ ಪ್ರಕಾಶ ಬಡವಣ್ಣವರ, ಅರ್ಜುನ ಕಡೆಟ್ಟಿ, ಶ್ರೀಧರ ಯರಡಾಲ, ಮಲ್ಲಾಪುರ ಗ್ರಾಪಂ ಅಧ್ಯಕ್ಷ ಅಶೋಕ ವಕ್ಕುಂದ, ದೇಶನೂರ ಗ್ರಾಪಂ ಅಧ್ಯಕ್ಷೆ ಶಂಕ್ರೆಮ್ಮ ಚಡಿಚ್ಯಾಳ, ಬಸನಗೌಡ ಪಾಟೀಲ, ಆಸಿಫ್ ಲತೀಫ್, ವನಜಾಕ್ಷಿ ಪಾಟೀಲ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts