More

    ಕರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

    ಸಾಗರ: ನಗರ ವ್ಯಾಪ್ತಿಯಲ್ಲಿ ಕರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಸಂಬಂಧಿಸಿ ತಾಲೂಕು ಹಾಗೂ ನಗರ ಆಡಳಿತ ಸೂಕ್ತ ಕ್ರಮ ಜರುಗಿಸುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನವಿ ಮಾಡಿದರು.

    ಶನಿವಾರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ ಅವರನ್ನು ಭೇಟಿ ಮಾಡಿ ಕರೊನಾ ಕುರಿತು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆಯೊಳಗೆ 4 ಪ್ರಕರಣ ದಾಖಲಾಗಿವೆ. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ ಎಂದರು.

    ಕರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಸಿ, ಡಿವೈಎಸ್ಪಿ, ಪೌರಾಯುಕ್ತರು, ತಹಸೀಲ್ದಾರ್, ಟಿಎಚ್​ಒ ಒಳಗೊಂಡ ತಂಡ ರಚಿಸಿಕೊಳ್ಳಿ. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕರೊನಾ ಕುರಿತು ಜಾಗೃತಿ ಮೂಡಿಸಲು ಮೈಕ್, ಕರಪತ್ರದ ಮೂಲಕ ಪ್ರಚಾರ ಮಾಡುವಂತೆ ಸಲಹೆ ನೀಡಿದರು.

    ಸಾಗರದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್ ನಿರ್ವಿುಸಿ, ನಗರಕ್ಕೆ ಪ್ರವೇಶಿಸುವವರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ, ವಾಹನಗಳಿಗೆ ಸ್ಯಾನಿಟೈಸ್ ಮಾಡಿ ಒಳಗೆ ಬಿಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವುದು, ತರಕಾರಿ ಮಾರಾಟಗಾರರಿಗೆ ಸೂಕ್ತ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲ ಕಚೇರಿಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ಇರಿಸಿಕೊಳ್ಳುವಂತೆ ಆದೇಶ ಜಾರಿಗೆ ಮಾಡಬೇಕು. ಈ ಬಗ್ಗೆ ಡಿಸಿ ಜತೆ ಮಾತನಾಡುತ್ತೇನೆ ಎಂದರು.

    ಎಪಿಎಂಸಿ ಸದಸ್ಯ ಎಚ್.ಎಂ.ರವಿಕುಮಾರ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್.ಸುರೇಶಬಾಬು, ಪ್ರಧಾನ ಕಾರ್ಯದರ್ಶಿ ಮಹಾಬಲ ಕೌತಿ, ಪ್ರವೀಣ ಬಣಕಾರ್, ಬಾಬಣ್ಣ, ತಾರಾಮೂರ್ತಿ, ತಬ್ರೀಜ್, ಕಬೀರ್ ಚಿಪ್ಳಿ, ಜಯರಾಮ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts