More

    ಕರೊನಾ ನಿಯಂತ್ರಣಕ್ಕೆ ‘ವಿಶೇಷ ತಂಡ’

    ಬೆಳಗಾವಿ: ನೆರೆಯ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ನಗರದಲ್ಲಿ ಕರೊನಾ 2ನೇ ಅಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಇದೀಗ ‘ವಿಶೇಷ ತಂಡ’ಗಳನ್ನು ರಚನೆ ಮಾಡಿದೆ. ಮಂಗಳವಾರದಿಂದಲೇ ನಗರದ ತುಂಬ ಕಾರ್ಯಾಚರಣೆ ಆರಂಭಿಸಲಿದೆ.

    ನಗರದ ಮಾರುಕಟ್ಟೆ, ವಾಣಿಜ್ಯ ಮಳಿಗೆಗಳು, ಬಸ್ ನಿಲ್ದಾಣ, ದೇವಸ್ಥಾನ, ಉದ್ಯಾನ, ವೃತ್ತಗಳು ಸೇರಿ ವಿವಿಧ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕಾಗಿ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಕಂದಾಯ, ಆರೋಗ್ಯ ವಿಭಾಗ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿವಿಧ ಠಾಣೆ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳು ಕಾರ್ಯ ನಿರ್ವಹಿಸಲಿವೆ.

    ಮಹಾರಾಷ್ಟ್ರ ರಾಜ್ಯದ ಸೋಂಕಿತ ಪ್ರದೇಶಗಳಿಂದ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ವಿಜಯಪುರ, ಕಲಬುರಗಿ, ಬೀದರ ಹಾಗೂ ಬಳ್ಳಾರಿಯಿಂದ ವ್ಯಾಪಾರಿಗಳು, ವಿವಿಧ ಕಂಪನಿಗಳು ಉದ್ಯೋಗಿಗಳು ಕೆಲಸ ನಿಮಿತ್ತ ಬೆಳಗಾವಿ ನಗರಕ್ಕೆ ಬಂದು ಹೋಗುತ್ತಿದ್ದಾರೆ. ಜತೆಗೆ ಸುತ್ತಮುತ್ತಲಿನ ಹಳ್ಳಿಯ ಜನರು ನಗರಕ್ಕೆ ಬರುತ್ತಿದ್ದಾರೆ. ಆದರೆ, ಯಾರೂ ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳದೆ ಓಡಾಡುತ್ತಿದ್ದಾರೆ. ಇದರಿಂದಾಗಿ ನಗರದಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಆರೋಗ್ಯ ವಿಭಾಗ ಅಧಿಕಾರಿಗಳ ನೇತೃತ್ವ ತಂಡವು ನಗರದ ಪ್ರಮುಖ ರಸ್ತೆಗಳು, ವೃತ್ತಗಳು, ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಹಾಕದಿರುವವರ ವಿರುದ್ಧ ಕಾರ್ಯಾಚರಣೆ ಆರಂಭಿಸಲಿದೆ.

    ಹೋಟೆಲ್‌ಗಳ ಮೇಲೆ ದಾಳಿ : ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪರವಾನಗಿ ಪಡೆದುಕೊಂಡಿರುವ 234ಕ್ಕೂ ಅಧಿಕ ದೊಡ್ಡ ಮತ್ತು ಮಧ್ಯಮ ಗಾತ್ರದ ಹೋಟೆಲ್‌ಗಳು ಹಾಗೂ 120ಕ್ಕೂ ಅಧಿಕ ಲಾಡ್ಜ್‌ಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಈ ಎಲ್ಲ ಹೋಟೆಲ್‌ಗಳಿಗೆ ನಿತ್ಯ ಕನಿಷ್ಠ 3 ರಿಂದ 4 ಸಾವಿರ ಜನರು ಬಂದು ಹೋಗುತ್ತಾರೆ. ಆದರೆ, ಯಾವುದೇ ಹೋಟೆಲ್‌ಗಳಲ್ಲಿ ಅಂತರ ಇಲ್ಲ. ಮಾಸ್ಕ್ ಕಡ್ಡಾಯಗೊಳಿಸಿಲ್ಲ. ತಮ್ಮ ವ್ಯಾಪಾರ ವಹಿವಾಟಿಗಾಗಿ ಕೋವಿಡ್-19 ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವಶ್ಯಬಿದ್ದರೆ ಹೋಟೆಲ್ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯ ಸರ್ಕಾರವು ಕೊರನಾ 2ಲೇ ತಡೆಯುವ ನಿಟ್ಟಿನಲ್ಲಿ ನಗರ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದೆ. ಸಾರ್ವಜನಿಕರು ಸಹಕರಿಸದಿದ್ದರೆ ಕಠಿಣ ಎದುರಿಸಬೇಕಾಗುತ್ತದೆ. ಮಂಗಳವಾರದಿಂದಲೇ ಪಾಲಿಕೆ ಅಧಿಕಾರಿ, ಪೊಲೀಸರು ತಂಡಗಳು ಕಾರ್ಯಾಚರಣೆ ಆರಂಭಿಸಲಿವೆ. ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಬಿಸಿ ನೀರು ನೀಡಬೇಕು. ಜತೆಗೆ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಮಾರುಕಟ್ಟೆಗಳಲ್ಲಿ ನಿಯಮ ಪಾಲನೆ ಮಾಡದಿರುವ ವ್ಯಾಪಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು.
    | ಜಗದೀಶ ಕೆ.ಎಚ್. ಪಾಲಿಕೆ ಆಯುಕ್ತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts