More

    ಕರೊನಾ ನಿಯಂತ್ರಣದಲ್ಲಿದೆ, ಭಯ ಬೇಡ

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕರೊನಾ ಸೋಂಕು ನಿಯಂತ್ರಣದಲ್ಲಿದೆ. ಸಾರ್ವಜನಿಕರು ಅನಗತ್ಯವಾಗಿ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

    ನಗರದ ಕಿಮ್ಸ್​ನಲ್ಲಿ ಕೋವಿಡ್ ಕರ್ತವ್ಯ ನಿರ್ವಹಿಸಿ ರೋಗಿಗಳ ಆರೈಕೆ ಮಾಡಿದ ಸ್ಟಾಫ್ ನರ್ಸ್​ಗಳಿಗೆ ಶುಕ್ರವಾರ ಸನ್ಮಾನಿಸಿ ಅವರು ಮಾತನಾಡಿದರು.

    ಕೋವಿಡ್ ಚಿಕಿತ್ಸೆಗಾಗಿ ಕಿಮ್ಸ್​ನಲ್ಲಿ 250 ಸೇರಿ ಇತರೆಡೆ 500 ಬೆಡ್​ಗಳನ್ನು ಗುರುತಿಸಲಾಗಿದೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯದ ಹವಾಮಾನ ಸ್ಥಿತಿಯಲ್ಲಿ ಸೋಂಕು ಹರಡುವ ಸಂಭವ ಹೆಚ್ಚಿದೆ. ಜನರು ಅನಗತ್ಯವಾಗಿ ಓಡಾಡುವುದನ್ನು ಕಡಿಮೆ ಮಾಡಬೇಕು. ಪರಸ್ಪರ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಕೋವಿಡ್ ಪರೀಕ್ಷೆ ಮಾಡುತ್ತಿರುವುದರಿಂದ ಹೆಚ್ಚು ಪ್ರಕರಣ ಬೆಳಕಿಗೆ ಬರುತ್ತಿವೆ. ವೈದ್ಯಕೀಯ ಸಿಬ್ಬಂದಿ ಸುರಕ್ಷತಾ ಸಲಕರಣೆಗಳೊಂದಿಗೆ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರ ಸೇವೆ ಅನುಪಮವಾದದು ಎಂದರು.

    ಸ್ಟಾಫ್ ನರ್ಸ್​ಗಳಾದ ಮಂಜುಳಾ ಕೊತರೆ, ಕಮಲಾ, ಬಾಲಕೃಷ್ಣ, ಗಂಗಮ್ಮ ಬಳ್ಳಾರಿ, ಶ್ವೇತಾ ಬಣ್ಣಾ, ಆಶಾ ಎಸ್.ಬಿ., ಜ್ಯೋತಿ ಡಿ.ಸಿ, ರಾಜೇಶ್ವರಿ ಎಚ್. ಸೇರಿ ಹನ್ನೊಂದು ಜನರನ್ನು ಗೌರವಿಸಲಾಯಿತು.

    ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಸಿ., ಡಾ. ರಾಜಶೇಖರ ದ್ಯಾಬೇರಿ, ಡಾ. ಎಸ್.ವೈ. ಮುಲ್ಕಿಪಾಟೀಲ, ಡಾ. ಲಕ್ಷ್ಮೀಕಾಂತ ಲೋಕರೆ, ಸಿಇಒ ರಾಜಶ್ರೀ ಜೈನಾಪುರ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ತಹಸೀಲ್ದಾರ್ ಶಶಿಧರ ಮಾಡ್ಯಾಳ, ವಾರ್ತಾ ಇಲಾಖೆ ಅಧೀಕ್ಷಕ ವಿನೋದ ಕುಮಾರ ಡಿ. ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts