More

    ಕರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ

    ಕೋಲಾರ: ಕರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ, ಶುಚಿತ್ವ ಕಾಪಾಡಿ, ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಿ ಎಂದು ರಾಜ್ಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆ ಜಂಟಿ ನಿರ್ದೇಶಕಿ ಗಾಯತ್ರಿದೇವಿ ಸೂಚನೆ ನೀಡಿದರು.

    ರಾಜ್ಯಾದ್ಯಂತ ಜ.1ರಿಂದ ಶಾಲೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಮಾರ್ಗಸೂಚಿ ಪಾಲನೆ ಕುರಿತು ಬುಧವಾರ ಶಿಕ್ಷಣ ಇಲಾಖೆಯ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಸಭೆಯ ನಂತರ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭಕ್ಕೆ ಮಾಡುತ್ತಿರುವ ಸಿದ್ಧತೆ ಪರಿಶೀಲಿಸಿದರು.

    ಕರೊನಾ ಆತಂಕ ಕಡಿಮೆಯಾದರೂ ಮುಂಜಾಗ್ರತೆ ಅತಿಮುಖ್ಯ. ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಮಕ್ಕಳು ಶಾಲೆಗೆ ಬಂದಾಗ ಪರಸ್ಪರ ಅಂತರ ಕಾಯ್ದುಕೊಳ್ಳುವ ಅಗತ್ಯವಿದೆ. ಮಾಸ್ಕ್ ಕಡ್ಡಾಯವಾಗಿ ಬಳಸಬೇಕು, ಮಕ್ಕಳ ಕೈಗೆ ಸ್ಯಾನಿಟೈಸರ್ ಹಾಕಿ ಕೊಠಡಿಯೊಳಗೆ ಕರೆತರಬೇಕು ಎಂದರು.

    ರೂಪಾಂತರಿ ವೈರಸ್ ಕುರಿತು ಆತಂಕ ಬೇಡ, ಈಗಾಗಲೆ ಮಕ್ಕಳಿಗೆ ಶೈಕ್ಷಣಿಕವಾಗಿ ಹಿನ್ನಡೆಯಾಗಿದೆ, ಈಗ ಶಾಲೆ ಆರಂಭದ ಮೂಲಕ ಮಕ್ಕಳ ಕಲಿಕಾ ಪ್ರಗತಿಗೆ ಒತ್ತು ನೀಡಬೇಕು ಎಂದರು.

    ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲೇ 10ನೇ ತರಗತಿಯ ಎಲ್ಲ ಮಕ್ಕಳಿಗೆ ಕರೊನಾ ಪರೀಕ್ಷೆ ನಡೆಸಿ ಫಲಿತಾಂಶ ಪಡೆದುಕೊಂಡಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಗೆ ಮಕ್ಕಳು ಬರಲು ಪಾಲಕರಿಂದ ಒಪ್ಪಿಗೆ ಪತ್ರ ಪಡೆಯಬೇಕು, ಶಾಲೆಗೆ ಬರಲೊಪ್ಪದ ಮಕ್ಕಳಿಗೆ ಆನ್‌ಲೈನ್ ತರಗತಿ ಮುಂದುವರಿಸಬಹುದು ಎಂದರು.

    ಖಾಜಿಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಡಿಪಿಐ ಕೃಷ್ಣಮೂರ್ತಿ, ಬಿಇಒ ಕೆ.ಎಸ್.ನಾಗರಾಜಗೌಡ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ, ಪ್ರಭಾರಿ ಮುಖ್ಯಶಿಕ್ಷಕ ಸಚ್ಚಿದಾನಂದ ಮೂರ್ತಿ, ಶಿಕ್ಷಕರಾದ ಭವಾನಿ, ಲೀಲಾ, ಶ್ರೀನಿವಾಸಲು, ಡಿ.ಚಂದ್ರಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts