More

    ಕರೊನಾ ಮುಕ್ತ ಗ್ರಾಮ ಅಭಿಯಾನ ಶೀಘ್ರ ಆರಂಭ

    ಧಾರವಾಡ: ಪ್ರಧಾನಮಂತ್ರಿ ಹೇಳಿದಂತೆ ಜನ ಭಾಗಿದಾರ್ ಕಲ್ಪನೆಯಡಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ಸಹಯೋಗದಲ್ಲಿ ಕರೊನಾ ಮುಕ್ತ ಗ್ರಾಮ ಅಭಿಯಾನ ಹಮ್ಮಿಕೊಳ್ಳಲಾಗುವುದು. ಈ ಕುರಿತು ಮಾರ್ಗಸೂಚಿಗಳಿರುವ ಪ್ರತ್ಯೇಕ ಪತ್ರವನ್ನು ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಂಗಳವಾರ ವಿಡಿಯೋ ಸಂವಾದದಲ್ಲಿ ಭಾಗಿಯಾದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

    ಕರೊನಾ ಮುಕ್ತ ಗ್ರಾಮ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಗ್ರಾಮಲೆಕ್ಕಾಧಿಕಾರಿ ಒಳಗೊಂಡ ಕೋವಿಡ್ ಕಾರ್ಯ ಪಡೆ ಮೂಲಕ ನಿಯಂತ್ರಿಸುವ ಕಾರ್ಯ ಮಾಡಲಾಗುವುದು. ಗ್ರಾಪಂಗಳು ಗ್ರಾಮ ಸಭೆಯಲ್ಲಿ ಠರಾವ್ ಮಾಡಿ ಗ್ರಾಮ ವ್ಯಾಪ್ತಿಯಲ್ಲಿ ಲಾಕ್​ಡೌನ್ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ, ಕೋವಿಡ್ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಹಾಗೂ ಒಂದು ಸ್ಥಳ ಅಥವಾ ಕಟ್ಟಡದಲ್ಲಿ ಐದಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ಮಾರ್ಗಸೂಚಿ ಪ್ರಕಾರ ಅದನ್ನು ಮೈಕ್ರೋ ಕಂಟೇನ್ಮೆಂಟ್ ಹಾಗೂ ಕಂಟೇನ್ಮೆಂಟ್ ಪ್ರದೇಶವೆಂದು ಗುರುತಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಬಹುದು ಎಂದರು.

    ಗ್ರಾಮ ಮಟ್ಟದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕರೊನಾ ಕುರಿತ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ, ಸ್ಥಳದಲ್ಲೇ ಅಗತ್ಯ ಸಲಹೆ ನೀಡಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಹೋಂ ಐಸೋಲೇಷನ್​ನಲ್ಲಿನ ಸೋಂಕಿತರಿಗೆ ಅಗತ್ಯ ಚಿಕಿತ್ಸೆ, ಔಷಧ ಮತ್ತು ಕೋವಿಡ್ ಸುರಕ್ಷತಾ ಕ್ರಮಗಳ ಮಾಹಿತಿ ನೀಡಲು ಎಂಬಿಬಿಎಸ್ ವೈದ್ಯಕೀಯ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ತೀರ್ವನಿಸಲಾಗಿದೆ. ಅವರಿಗೆ ಮಾಸಿಕ 15,000 ರೂಪಾಯಿ ಗೌರವಧನ ನೀಡಲಾಗುವುದು ಎಂದರು.

    ಜಿಲ್ಲೆಯ ಅಂಗವಿಕಲರಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು. ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ಲಸಿಕೆ ಪಡೆಯಬಹುದು. ಜನದಟ್ಟಣೆ ನಿಯಂತ್ರಿಸಲು ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆ ಬದಲು ಲ್ಯಾಮಿಂಗ್ಟನ್ ಶಾಲೆಯಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಲಸಿಕೆ ಪಡೆಯುವವರಿಗೆ ಪ್ರತಿ ಕೇಂದ್ರದಲ್ಲಿ ಟೋಕನ್ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು ಟೋಕನ್​ಗಳ ಪೈಕಿ ಅರ್ಧದಷ್ಟನ್ನು ಬೆಳಗ್ಗೆ 9.30ಕ್ಕೆ ಮತ್ತು

    ಉಳಿದವನ್ನು ಮಧ್ಯಾಹ್ನ 12 ಗಂಟೆಗೆ ವಿತರಿಸಲು ಸೂಚಿಸಲಾಗಿದೆ ಎಂದರು.

    ಪೊಲೀಸ್ ಆಯುಕ್ತ ಲಾಭೂರಾಮ್ ಜಿಪಂ ಸಿಇಒ ಡಾ. ಸುಶೀಲಾ ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಡಾ. ಗೋಪಾಲ ಕೃಷ್ಣ ಬಿ., ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಡಿಮ್ಹಾನ್ಸ್ ನೋಡಲ್ ಅಧಿಕಾರಿ ಡಾ. ರಾಘವೇಂದ್ರ ನಾಯಕ, ಡಾ.ಎಸ್.ಎಂ. ಹೊನಕೇರಿ, ಡಿಎಸ್​ಒ ಡಾ. ಸುಜಾತಾ ಹಸವಿಮಠ, ಡಾ. ಶಶಿ ಪಾಟೀಲ, ಡಾ. ಲಕ್ಷ್ಮೀಕಾಂತ ಲೋಕರೆ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts