ಕರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ

IMG-20200705-WA0090
Published on

ಗೌರಿಬಿದನೂರು : ಕರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ ಮಾಡಿರುವುದಾಗಿ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಕರೊನಾ ಕೇರ್ ಸೆಂಟರ್ ಆಗಿ ಗುರುತಿಸಿರುವ ನಗರದ ಹೊರವಲಯದ ಮರಳೂರು ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದೆ. ಒಂದು ವೇಳೆ ಸೋಂಕು ಹೆಚ್ಚಾದಲ್ಲಿ ಆಯಾ ತಾಲೂಕು ಮಟ್ಟದಲ್ಲೇ ಚಿಕಿತ್ಸೆ ನೀಡುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಕರೊನಾ ಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದೆ. 10 ಸಾವಿರ ಹಾಸಿಗೆಗಳನ್ನು ಸಿದ್ಧತೆ ಮಾಡಿಕೊಂಡಿದ್ದು, ತಾಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದರು.

ತಾಲೂಕು ಕೋವಿಡ್ ನೋಡಲ್ ಅಧಿಕಾರಿ ತೇಜ್ ಆನಂದರೆಡ್ಡಿ ಅವರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ, ತಾಲೂಕಿನಲ್ಲಿ 2000 ಹಾಸಿಗೆಗಳನ್ನು ಸಿದ್ಧತೆಯಲ್ಲಿರಿಸಿಕೊಳ್ಳುವಂತೆ ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಎಸಿ ರಘುನಂದನ್, ತಹಸೀಲ್ದಾರ್ ರಾಜಣ್ಣ, ಸಿಪಿಐ ಎಸ್.ರವಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮಹದೇವಸ್ವಾಮಿ, ಬಿಸಿಎಮ್ ಅಧಿಕಾರಿ ನಾಗರಾಜು, ಪಿಎಸೈ ಮೋಹನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net