More

    ಕರೊನಾ ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ

    ಕೋಲಾರ: ಕರೋನಾಮುಕ್ತ ದೇಶವನ್ನಾಗಿ ಮಾಡಲು ಭಾರತ ಸ್ವದೇಶಿ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ, ಈ ಬಗ್ಗೆ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.

    ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಸೋಮವಾರ ಕೋವಿಶೀಲ್ಡ್ ಕರೋನಾ ಲಸಿಕೆ ಹಾಕಿಸಿಕೊಂಡ ನಂತರ ಮಾತನಾಡಿ, ಸಾರ್ವಜನಿಕರು ಕರೊನಾ ಲಸಿಕೆಯ ಬಗ್ಗೆ ಯಾವುದೇ ಅನುಮಾನ ಹಾಗೂ ಗೊಂದಲ ಇಟ್ಟುಕೊಳ್ಳಬೇಡಿ. ಕರೋನಾ ಲಸಿಕೆ ಬಂದ ನಂತರ ಜಿಲ್ಲೆಯಲ್ಲಿ ಲಸಿಕೆ ನೀಡುವಲ್ಲಿ ಶೇ. 65 ಪ್ರಗತಿ ಸಾಧಿಸಿದ್ದೇವೆ. ಇದುವರೆಗೆ ಯಾವುದೇ ಅಡ್ಡ ಪರಿಣಾಮ ಕಂಡುಬಂದಿಲ್ಲ ಎಂದರು.

    ಕರೋನಾ ಲಸಿಕೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ನೋಂದಾಯಿತ ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಂದಾಯ ಇಲಾಖೆ, ಪೊಲೀಸ್ ಇಲಾಖೆಯ ಸಿಬ್ಬಂದಿಗೆ ನೀಡಲಾಗುತ್ತಿದ್ದು, ಯಾವುದೇ ಭಯಯಿಲ್ಲದೆ ಲಸಿಕೆ ಪಡೆಯಬಹುದು. ಲಸಿಕೆಯನ್ನು ಸಾವಿರಾರು ಜನರ ಮೇಲೆ ಪ್ರಯೋಗ ಮಾಡಿ, ಯಶಸ್ವಿಯಾದ ನಂತರ ನೀಡಲಾಗುತ್ತಿದೆ. ಲಸಿಕೆಯಲ್ಲಿ ಎರಡು ಡೋಸ್ ಪಡೆಯಬೇಕು. ಮೊದಲ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕು ಎಂದರು.

    ಹಾಲುಣಿಸುವ ತಾಯಂದಿರು, ಗರ್ಭಿಣಿಯರು, ಶ್ವಾಸಕೋಶ ಸಂಬಂಧಿತ ಕಾಯಿಲೆ ಇರುವವರು, ಅಲರ್ಜಿ ಹೊಂದಿರುವರು ಹಾಗೂ 18 ವರ್ಷ ಒಳಪಟ್ಟವರು ಲಸಿಕೆ ಪಡೆಯುವಂತಿಲ್ಲ ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ಜನ್ ಡಾ. ಎಸ್.ಜಿ. ನಾರಾಯಣಸ್ವಾಮಿ, ಆರ್‌ಸಿಎಚ್ ಅಧಿಕಾರಿ ವಿಜಯಕುಮಾರಿ ಹಾಗೂ ವೈದ್ಯ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts