More

    ಕರೊನಾ ಲಸಿಕೆ ಕಡ್ಡಾಯ ಪಡೆದುಕೊಳ್ಳಿ

    ಯಾದಗಿರಿ: ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕೋವಿಡ್ ಮೂರನೇ ಅಲೆಯಿಂದ ಪಾರಾಗಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಕರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಕರೆ ನೀಡಿದರು.

    ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ಜಿಲ್ಲಾಡಳಿತ ಆಯೋಜಿಸಿದ್ದ 73ನೇ ಗಣರಾಜ್ಯೋತ್ಸವ ದಿನದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಪಡೆಯಬೇಕು. ಸಧ್ಯ ವೇಗವಾಗಿ ಹರಡುತ್ತಿರುವ ಸೋಂಕಿಗೆ ಕಡಿವಾಣ ಹಾಕಬೇಕಾದರೆ ಪರಸ್ಪರ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಡೀ ದೇಶ ಆತ್ಮನಿರ್ಭರ ಭಾರತದತ್ತ ಹೆಜ್ಜೆ ಇರಿಸಿದೆ. ಸ್ವಾವಲಂಬನೆಯ ಬದುಕನ್ನು ಸಾಕಾರಗೊಳಿಸುವ ನಿಟ್ಟನಲ್ಲಿ ಆತ್ಮನಿರ್ಭರ ಭಾರತ ಕಟ್ಟುವ ಕಾಯಕದಲ್ಲಿ ಪ್ರತಿಯೊಬ್ಬ ದೇಶವಾಸಿಯ ಪಾಲಿದೆ. ಜಗತ್ತಿನ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ನಮಗೆ ಜನಸಂಖ್ಯೆ ಶಾಪವಲ್ಲ. ಒಟ್ಟು ಜನಸಂಖ್ಯೆಯನ್ನು ಶ್ರೇಷ್ಠ ಮಾನವ ಸಂಪನ್ಮೂಲವಾಗಿ ಪರಿವತರ್ಿಸಿಕೊಳ್ಳುವ ವಿಪುಲ ಅವಕಾಶಗಳಿವೆ. ಅತಿ ಹೆಚ್ಚು ಇಂಜಿನಿಯರ್, ತಂತ್ರಜ್ಞರು, ವೈದ್ಯರು, ಪದವೀಧರರನ್ನು ಹೊಂದಿರುವ ರಾಷ್ಟ್ರ ನಮ್ಮದು ಎಂದು ಬಣ್ಣಿಸಿದರು.

    ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನಾನು ಕಟಿಬದ್ಧನಾಗಿದ್ದೇನೆ. ಜನಪ್ರತಿನಿಧಿಗಳು ಹಾಗೂ ಎಲ್ಲ ಅಧಿಕಾರಿಗಳೊಂದಿಗೆ ಜನರ ಅಭ್ಯುದಯಕ್ಕಾಗಿ ಶ್ರಮಿಸಲಾಗುವುದು. ನಾನು ಪಶುಸಂಗೋಪನೆ ಸಚಿವನಾದ ನಂತರ ಗೋಮಾತೆಯನ್ನು ಹಾಗೂ ಮೂಕಪ್ರಾಣಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಗೋಹತ್ಯೆ ತಡೆ ಮಸೂದೆ ಜಾರಿಗೆ ತಂದಿದ್ದೇನೆ. ಅಲ್ಲದೆ ಗೋವಧೆ ಕಂಡು ಬಂದರೆ ತಕ್ಷಣ ಮಾಹಿತಿ ನೀಡಲು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವಾಕಾಂಕ್ಷಿ ಯಾದಗಿರಿ ಜಿಲ್ಲೆಯ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಜತೆ ಸಂವಾದ ನಡೆಸಿರುವುದು ಸಂತಸದ ಸಂಗತಿ. ಪ್ರಧಾನಿ ಅವರ ಆಶಯದಂತೆ ನಾನು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಪ್ರಯತ್ನಿಸುವೆ ಎಂದರು.

    ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಆರ್., ಶಾಸಕ ವೆಂಕಟರಡ್ಡಿ ಮುದ್ನಾಳ್, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಯೂಡಾ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂತರ್ಿ, ಅಪರ ಡಿಸಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ ಇದ್ದರು.

    ಸಾಧಕರಿಗೆ ಜಿಲ್ಲಾಡಳಿತದಿಂದ ಸತ್ಕಾರ
    ಕಾರ್ಯಕ್ರಮದಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ಇಲಾಖೆಗಳು ತಮ್ಮ ನಿಗಧಿತ ಸೂಚ್ಯಂಕಗಳಲ್ಲಿ ಉತ್ತಮ ಪ್ರಗತಿ ಸಾಧಿಸಿದ ಕಾರಣ ಮಾಧ್ವಾರ ಅಂಗನವಾಡಿ ಕೇಂದ್ರದ ಕಾರ್ಯಕತರ್ೆ ಬನ್ನಮ್ಮ, ಅನಪುರನ ಪದ್ಮಾವತಿ, ದೋರನಹಳ್ಳಿಯ ಚಂದಮ್ಮ, ರಾಜನಕೊಳ್ಳೂರನ ಬಸ್ಸಮ್ಮ ಬಂಡೋಳಿ ಮತ್ತು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಹನುಮಂತ ರೆಡ್ಡಿ, ಡಾ.ಶರಣು ಹೊಸಮನಿ, ಯರಗೋಳದ ಡಾ.ಫಿದರ್ೋಸ್, ಹಸನಾಪುದ ಡಾ.ಅಲ್ಲಾವುದ್ದೀನ್ ಅವರಿಗೆ ಸನ್ಮಾನಿಸಲಾಯಿತು. ಅದರಂತೆ ಕಲ್ಯಾಣ ಕನರ್ಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಪರಾಧ ರಹಿತ ಸೇವೆ ಸಲ್ಲಿಸಿದ ಒಟ್ಟು 15 ಚಾಲಕರಿಗೆ ನಿಗಮದಿಂದ ಬೆಳ್ಳಿ ಪದಕ, ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts