More

    ಕರೊನಾ ಲಸಿಕೆ ಬಗ್ಗೆ ಸೂಕ್ತ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಗರಂ

    ದೊಡ್ಡಬಳ್ಳಾಪುರ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ತುರ್ತು ಸಭೆಯಲ್ಲಿ ಕರೊನಾ ಲಸಿಕೆ ಬಗ್ಗೆ ಸೂಕ್ತ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಗರಂ ಆದರು.

    ವ್ಯಾಕ್ಸಿನ್ ಪ್ರಗತಿ ಬಗ್ಗೆ ವರದಿ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ವಿಳಂಬ ಮಾಡಿದ್ದೀರಿ. ಲಸಿಕೆ ವಿತರಣೆಯಲ್ಲಿ ಎಷ್ಟರ ಮಟ್ಟಿಗೆ ಸಾಧನೆ ಮಾಡಿದ್ದೀರಿ ಎಂದು ಆಕ್ಷೇಪಿಸಿ, ಲಸಿಕೆ ವಿತರಣೆಯಲ್ಲಿ ಶೇ.100 ಸಾಧನೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದರು.
    ಮೂರನೇ ಅಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾದರೆ ಏನೇನು ಸಿದ್ಧತೆ ಮಾಡಿಕೊಂಡಿದ್ದೀರಾ ಎಂದು ಪ್ರಶ್ನೆ ಮಾಡುವ ಮೂಲಕ ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದರು.

    ತಡವಾಗಿ ಬಂದವರಿಗಿಲ್ಲ ಪ್ರವೇಶ: ಸಭೆಗೆ ತಡವಾಗಿ ಬಂದ ನಗರಸಭೆ ಅಧಿಕಾರಿಗಳ ಡಿಸಿ, ಸಭೆಯಿಂದ ಹೊರಗೆ ಕಳುಹಿಸಿದರು. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಲಸಿಕೆ ವಿತರಣೆಯಲ್ಲಿ ಶೇ.90ಕ್ಕಿಂತ ಹೆಚ್ಚು ಸಾಧನೆ ಮಾಡಿವೆ. ಆದರೆ ರಾಜಧಾನಿಗೆ ಹೊಂದಿಕೊಂಡಂತಿರುವ ಜಿಲ್ಲೆಯಲ್ಲಿ ಪ್ರಗತಿ ಏನೂ ಸಾಲದು ಎಂದು ಬೇಸರಿಸಿದರು.

    ಮಾಧ್ಯಮದ ವಿರುದ್ಧ ಗರಂ: ಅಧಿಕಾರಿಗಳ ಮೇಲೆ ಹರಿಹಾಯ್ದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮಾಧ್ಯಮದವರಿದ್ದರೆ ಆಚೆ ಕಳುಹಿಸಿ ಬಾಗಿಲು ಹಾಕಿ ಎಂದರು. ನಿಮಗೆ ಬರೋಕೆ ಯಾರೂ ಹೇಳಿಲ್ಲ ಎಂದು ಆಕ್ಷೇಪಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts