More

    ಕರೊನಾ ಸೋಂಕಿತರಿಗೆ ಸ್ಥಳೀಯವಾಗಿ ಚಿಕಿತ್ಸೆ

    ಬ್ಯಾಡಗಿ: 70 ಲಕ್ಷ ರೂ.ವೆಚ್ಚದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಇನ್ನು ಮುಂದೆ ತಾಲೂಕಿನ ಕರೊನಾ ಪಾಸಿಟಿವ್ ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ಸಿಗಲಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

    ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ 50 ಹಾಸಿಗೆಗಳ ಕೋವಿಡ್-19 ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿಯೂ ಕರೊನಾ ರೋಗ ಆವರಿಸಿದೆ. ಕೆಮ್ಮು, ನೆಗಡಿ, ಜ್ವರದಿಂದ ಬಳಲುವವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗಿಗಳಿಗೆ ಸಮರ್ಪಕ ಚಿಕಿತೆ್ಸೆ ಒದಗಿಸಲು ವೈದ್ಯ ಸಿಬ್ಬಂದಿ ಇನ್ನಷ್ಟು ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಿದರು.

    ಕೋವಿಡ್-19 ವಿಭಾಗವನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ ಉದ್ಘಾಟಿಸಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಪುಟ್ಟರಾಜ, ತಾಲೂಕು ವೈದ್ಯಾಧಿಕಾರಿ ಸುಹೀಲ್ ಹರವಿ, ವೈ. ಹಿರಿಯಕ್ಕನವರ, ಸದಾನಂದ ಚಿಕ್ಕಮಠ, ಮಹೇಶ ಭಜಂತ್ರಿ, ಡಾ. ವೀರೇಶ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೀರೇಂದ್ರ ಶೆಟ್ಟರ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಸುರೇಶ ಯತ್ನಳ್ಳಿ, ಹೊನ್ನೂರಪ್ಪ ಕಾಡಸಾಲಿ, ಸುರೇಶ ಉದ್ಯೋಗಣ್ಣನವರ, ಜಿತೇಂದ್ರ ಸುಣಗಾರ, ಸಂಜೀವ ಮಡಿವಾಳರ, ಶಿವಯೋಗಿ ಗಡಾದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts