ಕರೊನಾ ಹರಡುವಿಕೆ ತಡೆಯಲು ಜಾಗ್ರತೆ ವಹಿಸಿ: ಶ್ರವಣಬೆಳಗೊಳ ಸಮುದಾಯ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಯುವರಾಜ್ ಮನವಿ

IMG-20200707-WA0024.jpg
Published on

ಶ್ರವಣಬೆಳಗೊಳ: ಈಗಾಗಲೇ ಕೋವಿಡ್-19 ಕರೋನಾ ವೈರಸ್ ಸಮುದಾಯಕ್ಕೆ ಹರಡಿದ್ದು ಈಗ ಮುಂಜಾಗ್ರತೆ ಅತ್ಯಂತ ಅವಶ್ಯಕವಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಆರ್.ಯುವರಾಜ್ ಹೇಳಿದರು.

ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶೇಷ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ವೈಯಕ್ತಿಕ ಅಂತರ ಹಾಗೂ ಸ್ವಚ್ಛತೆ ಕಾಪಾಡಿಕೊಂಡರೆ ಮಾತ್ರ ಕರೊನಾ ಸೋಂಕು ರಹಿತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ರಮೇಶ್ ಮಾತನಾಡಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪಂಚಾಯ್ತಿ ವ್ಯಾಪ್ತಿಯಲ್ಲಿ 2 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 6 ಗಂಟೆಯಿಂದ 12 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಶನಿವಾರ ಭಾನುವಾರ ಸೇರಿದಂತೆ ಸಂಪೂರ್ಣ ಲಾಕ್ ಡೌನ್ ಮಾಡಲು ಗ್ರಾಮ ಪಂಚಾಯಿತಿ ವತಿಯಿಂದ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ವರ್ತಕರ ಸಂಘ, ಸವಿತಾ ಸಮಾಜ ಹಾಗೂ ನಾಗರಿಕರು ಪಾಲ್ಗೊಂಡು ಸಲಹೆಗಳನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net