More

    ಕರೊನಾ ಹೆಸರಿನಲ್ಲಿ ಕೋಟ್ಯಂತರ ರೂ.ಲೂಟಿ ; ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಆರೋಪ

    ಚಿಕ್ಕನಾಯಕನಹಳ್ಳಿ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆಯ ಸರ್ಕಾರಗಳಾಗಿದ್ದು, ಕರೊನಾ ಹತೋಟಿಗೆ ತರುವಲ್ಲಿ ವಿಫಲವಾಗಿವೆ. ಕಾಯಿಲೆ ಹೆಸರಿನಲ್ಲಿ ಸರ್ಕಾರಗಳು ಕೋಟಿಗಟ್ಟಲೇ ಹಣ ಲೂಟಿ ಮಾಡುತ್ತಿವೆ ಎಂದು ರಾಜ್ಯ ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಆರೋಪಿಸಿದರು.

    ಕುಪ್ಪೂರುಗದ್ದುಗೆ ಮಠದಲ್ಲಿ ಶನಿವಾರ ಪೀಠಾಧ್ಯಕ್ಷ ಡಾ.ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರೊನಾ ಸಮುದಾಯಕ್ಕೆ ಹರಡುವುದನ್ನು ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ಕಾಂಗ್ರೆಸ್ ಪ್ರತೀ ಗ್ರಾಮಪಂಚಾಯಿತಿಗೆ ಇಬ್ಬರಂತೆ ಜಿಲ್ಲೆಯ 330 ಗ್ರಾಪಂ ಸೇರಿ ರಾಜ್ಯದ 6250 ಗ್ರಾಪಂಗಳಲ್ಲಿ ಕರೊನಾ ಸೇನಾನಿಗಳನ್ನು ನೇಮಕ ಮಾಡಿ, ಜನರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ರೋಗಲಕ್ಷಣ ಹೊಂದಿರುವವರನ್ನು ಆಸ್ಪತ್ರೆಗಳಿಗೆ ದಾಖಲಿಸಲು ಸಹಾಯ ಮಾಡಲಾಗುವುದು ಎಂದು ಹೇಳಿದರು.

    ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲೂ ಭ್ರಷ್ಟಾಚಾರ ನಡೆದಿದ್ದು, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಕಾಂಗ್ರೆಸ್‌ನಿಂದ ಸ್ಪೀಕ್ ಆಫ್ ಕರ್ನಾಟಕ ಎಂಬ ಚಳವಳಿ ನಡೆಸಲಾಗುತ್ತದೆ ಎಂದರು. ಮಾಜಿ ಶಾಸಕ ಬಿ.ಲಕ್ಕಪ್ಪ, ಜಿಪಂ ಸದಸ್ಯ ವೈ.ಸಿ.ಸಿದ್ದರಾಮಯ್ಯ, ತಾಲೂಕು ಕಾಂಗ್ರೆಸ್ ಉಪಾಧ್ಯಕ್ಷ ಸಿ.ಡಿ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಬ್ರಹ್ಮಾನಂದ್, ತಾಲೂಕು ವಕ್ತಾರ ಕೆ.ಜಿ.ಕೃಷ್ಣೇಗೌಡ ಇದ್ದರು.

    ಸಚಿವರು ಕಾಣೆಯಾಗಿದ್ದಾರೆ : ಕರೊನಾ ಸಂಕಷ್ಟದಲ್ಲಿ ಬಡವರಿಗೆ ನೆರವು ನೀಡಿ ಆತ್ಮಸ್ಥೈರ್ಯ ತುಂಬುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ನಾವು ನಮ್ಮ ಸಚಿವರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಬೇಕೆಂದಿದ್ದೇವೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts