More

    ಕರ್ತವ್ಯಕ್ಕೆ ಗೈರಾಗಿ ಮುಷ್ಕರಕ್ಕೆ ಬೆಂಬಲ

    ಚಾಮರಾಜನಗರ : ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮಾ.1ರಂದು ರಾಜ್ಯವ್ಯಾಪಿ ನಿರ್ಧರಿಸಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಬೆಂಬಲ ಸೂಚಿಸಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ಹನೂರು ತಾಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.

    ಹನೂರು ಪಟ್ಟಣದ ವಿವಿಧ ಇಲಾಖೆಯ ಸರ್ಕಾರಿ ಕಚೇರಿಗಳಿಗೆ ಶುಕ್ರವಾರ ನೌಕರರೊಂದಿಗೆ ತೆರಳಿ ಮುಷ್ಕರ ಸಂಬಂಧಿತ ಕರಪತ್ರವನ್ನು ಹಂಚಿ ಮಾತನಾಡಿದ ಅವರು, ಸರ್ಕಾರಿ ನೌಕರರ ವೇತನ ಭತ್ಯೆಗಳಗಳ ಪರಿಷ್ಕರಣೆಗಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ನೌಕರರ ವೇತನ ಭತ್ಯೆಗಳ ಪರಿಷ್ಕರಣೆಯ ಸಂಬಂಧ ವಿಸ್ತ್ರತ ವರದಿಯನ್ನು ಸಲ್ಲಿಸಿತ್ತು. ಜು.1 2022ರಂದು ಜಾರಿಗೊಳಿಸಬೇಕಿತ್ತು. ಈ ಬಗ್ಗೆ ಸರ್ಕಾರ ಆಯವ್ಯಯದಲ್ಲೂ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದರಿಂದ ನೌಕರರ ಕುಟುಂಬದ ನಿರ್ವಹಣೆ ಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಸರ್ಕಾರ ಬಗ್ಗೆ ಗಮನಹರಿಸಿ ಚುನಾವಣೆ ನೀತಿ ಸಂಹಿತೆ ಜಾರಿ ಮುನ್ನವೇ 7ನೇ ವೇತನ ಆಯೊಗದ ಸೌಲಭ್ಯಗಳನ್ನು ಒದಗಿಸಕೊಡಬೇಕು. ಜತೆಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.


    ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶೋಕ್, ತಾಲೂಕು ಕಾರ್ಯದರ್ಶಿ ಚಂದ್ರಶೇಖರ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಮಲ್‌ದಾಸ್, ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿನಾಯಕ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಮಲ್ಲು ಹಾಗೂ ಇನ್ನಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts