More

    ಕರ್ನಾಟಕ ಕಾವಲು ಪಡೆ ಪ್ರತಿಭಟನೆ

    ಚಾಮರಾಜನಗರ: ಕೇಂದ್ರ ಸರ್ಕಾರ ದಿನಬಳಕೆಯ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ವಿಸಿರುವುದನ್ನು ವಿರೋಸಿ ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಸಂಘಟನೆಯ ಅಧ್ಯಕ್ಷ ಅಬ್ದುಲ್ ಮಾಲೀಕ್ ಮಾತನಾಡಿ, ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಹೈರಾಣಾಗಿದ್ದಾರೆ. ಕೇಂದ್ರ ಸರ್ಕಾರ ಜಿಎಸ್‌ಟಿ ವಿಸಿದ್ದರಿಂದ ಮತ್ತಷ್ಟು ಹೊರೆ ಬೀಳುತ್ತಿದೆ. ಕೂಡಲೇ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡುವ ಜತೆಗೆ ಜೀವನಾವಶ್ಯಕ ವಸ್ತುಗಳ ಬೆಲೆ ಇಳಿಕೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಬಳಿಕ ಮನವಿ ಪತ್ರವನ್ನು ತಹಸೀಲ್ದಾರ್ ರವಿಶಂಕರ್ ಅವರಿಗೆ ಸಲ್ಲಿಸಿದರು. ಗೌರವಾಧ್ಯಕ್ಷ ವೆಂಕಟೇಶ್‌ಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ರಶೀದ್, ಉಪಾಧ್ಯಕ್ಷ ಅಮೀರ್, ಇಲಿಯಾಸ್, ಮುಬಾರಕ್, ಸಾದಿಕ್ ಪಾಷಾ, ಶಕೀಲ್, ಮಂಜುನಾಥ್ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts