More

    ಕರ್ನಾಟಕ ಪವರ್ ಕಾರ್ಪೊರೇಷನ್‌ನಿಂದ 3.33 ಕೋಟಿ ರೂ. ಆಸ್ತಿ ತೆರಿಗೆ ಬಾಕಿ; ಪಪಂ ವಿರುದ್ಧ ಕೋರ್ಟ್‌ನಲ್ಲಿ ಕೇಸ್ ದಾಖಲು: ಸಿಎಂ ಬೊಮ್ಮಾಯಿ ಭೇಟಿ ಮಾಡಿ ವಿವರಿಸಿದ ನಿಯೋಗ

    ಕಾರ್ಗಲ್: ಪಟ್ಟಣ ಪಂಚಾಯಿತಿಗೆ ಕೆಪಿಸಿ (ಕರ್ನಾಟಕ ಪವರ್ ಕಾರ್ಪೊರೇಷನ್) 2005-06ರಿಂದ 2022-23ನೇ ಸಾಲಿನವರೆಗೆ ಒಟ್ಟು 3.33 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಪಾವತಿ ಮಾಡಬೇಕಿದ್ದು, ಈ ಹಣ ಪಾವತಿ ಮಾಡಲು ನಿರ್ದೇಶನ ನೀಡಬೇಕು ಎಂದು ಜೋಗ-ಕಾರ್ಗಲ್ ಪಪಂ ಆಡಳಿತ ಸಿಎಂ ಬಸವರಾಜ ಬೊಮ್ಮಾಯಿ ಮೊರೆ ಹೋಗಿದೆ.
    ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಜೋಗ-ಕಾರ್ಗಲ್ ಪಪಂ ಸದಸ್ಯರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿರುವ ಶಕ್ತಿ ಭವನದಲ್ಲಿ ಭೇಟಿ ಮಾಡಿ ಪಟ್ಟಣ ಪಂಚಾಯಿತಿಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕೆಪಿಸಿ, ಪಪಂ ವಿರುದ್ಧವೇ ಕೋರ್ಟ್‌ಗೆ ಹೋಗಿದೆ ಎಂದು ವಿವರಿಸಿತು. ಆಸ್ತಿ ತೆರಿಗೆ ಬಾಕಿ ಪಾವತಿಗೆ ಕೆಪಿಸಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿತು.
    ನಮ್ಮ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕೆಪಿಸಿ ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯಲು ನಿರ್ದೇಶಿಸುತ್ತೇನೆ. ಜತೆಗೆ ಜೋಗ-ಕಾರ್ಗಲ್ ಪಪಂಗೆ ಕಟ್ಟಬೇಕಾದ ಬಾಕಿ ತೆರಿಗೆಯನ್ನು ಪಾವತಿಸಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು ಎಂದು ಪಪಂ ಅಧ್ಯಕ್ಷೆ ವಾಸಂತಿ ರಮೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಪಪಂ ವ್ಯಾಪ್ತಿಯಲ್ಲಿನ ಆಗಬೇಕಾದ ರಸ್ತೆ ಅಭಿವೃದ್ಧಿ, ಬೀದಿದೀಪ ಹಾಗೂ ಸ್ವಚ್ಛತೆ ನಿರ್ವಹಣೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಕೆಪಿಸಿ ನಿಗಮದಿಂದ ಮಾಡಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಜತೆಗೆ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ನಿಗಮದ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು ಎಂದು ಮಾಹಿತಿ ನೀಡಿದರು.
    ಪಪಂ ಉಪಾಧ್ಯಕ್ಷ ಪಿ.ಮಂಜುನಾಥ್ ಮಾತನಾಡಿ, ತೆರಿಗೆ ಪಾವತಿಸುವಂತೆ ಕೆಪಿಸಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಇದೀಗ ಕೆಪಿಸಿ ಚೇರ್ಮನ್ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts