More

    ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ

    ಕಲಬುರಗಿ: ಪ್ರಸಕ್ತ ಸಾಲಿನಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ರಿತೇಂದ್ರನಾಥ ಸುಗೂರ ತಿಳಿಸಿದ್ದಾರೆ.
    ಈ ಯೋಜನೆಯಡಿ ಮುಖ್ಯ ಬೆಳೆಗಳನ್ನು ಜಿಲ್ಲೆಯ ಎಲ್ಲ ತಾಲೂಕುವಾರು, ಗ್ರಾಪಂ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. 2020ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಈ ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.
    ಹಿಂಗಾರು ಹಂಗಾಮಿಗೆ ಜೋಳ, ಸೂರ್ಯಕಾಂತಿ (ನೀರಾವರಿ ಮತ್ತು ಮಳೆಯಾಶ್ರಿತ), ಕಡಲೆ, ಕುಸುಮೆ (ಮಳೆಯಾಶ್ರಿತ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ನ.30 ಕೊನೆ ದಿನ. ಮುಸುಕಿನ ಜೋಳ (ನೀರಾವರಿ) ಹಾಗೂ ಗೋಧಿ (ನೀರಾವರಿ ಮತ್ತು ಮಳೆಯಾಶ್ರಿತ) ಬೆಳೆಗಳಿಗೆ ನೊಂದಣಿ ಮಾಡಿಕೊಳ್ಳಲು ಡಿಸೆಂಬರ್ 31 ಕೊನೆ ದಿನ. ಕಡಲೆ (ನೀರಾವರಿ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 16 ಕೊನೆ ದಿನ ಎಂದು ತಿಳಿಸಿದ್ದಾರೆ.
    ಬೇಸಿಗೆ ಹಂಗಾಮಿಗೆ ಭತ್ತ (ನೀರಾವರಿ) ಹಾಗೂ ನೆಲೆಗಡಲೆ (ಶೇಂಗಾ) (ನೀರಾವರಿ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಮಾಚರ್್ 1 ಕೊನೆಯ ದಿನ. ಸೂರ್ಯಕಾಂತಿ (ನೀರಾವರಿ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ನ. 30 ಕೊನೆ ದಿನ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಒಂದೇ ಆಗಿರುತ್ತದೆ.
    ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಿದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆಸಾಲ ಪಡೆಯದ ರೈತರು ಈ ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀದಿ ನೀಡಬೇಕು. ವಿಮಾ ಸಂಸ್ಥೆಗಳು ಬೆಳೆ ಸಾಲ ಪಡೆಯದ ರೈತರನ್ನು ತಮ್ಮ ಅಧಿಕೃತ ಏಜೆಂಟರ ಮೂಲಕವು ಸಹ ಯೋಜನೆಯಡಿ ನೋಂದಾಯಿಸಲು ಅನುಮತಿ ನೀಡಲಾಗಿದೆ.
    ಪ್ರತಿನಿಧಿಗಳ ಮೊಬೈಲ್ ಸಂಖ್ಯೆ
    ಕಲಬುರಗಿ ಜಿಲ್ಲೆ (8747905495, 9538185343, 9620006812, 88675087050), ಚಿತ್ತಾಪೂರ (9741232108), ಅಫಜಲಪುರ (9902356434), ಜೇವಗರ್ಿ (9900859561), ಆಳಂದ(9702944943), ಕಲಬುರಗಿ ತಾಲೂಕು (9538185343), ಚಿಂಚೋಳಿ(8095384057), ಸೇಡಂ (7204579007) ಸಂಪರ್ಕಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts